ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ ಸುಬ್ರಹ್ಮಣ್ಯಕ್ಕೆ‌ ಭಕ್ತರು: ಪೊಲೀಸರಿಂದ ದಂಡ

ಜಿಲ್ಲಾಡಳಿತದಿಂದ ಸುಬ್ರಹ್ಮಣ್ಯ ಪಂಚಾಯಿತಿ ಸೀಲ್‌ಡೌನ್
Last Updated 15 ಜೂನ್ 2021, 8:22 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಕ್ತರು ಬರುತ್ತಿದ್ದು, ಪೊಲೀಸರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ 4 ತಾಲ್ಲೂಕಿನ 17 ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದು, ಅದರಂತೆ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಸೀಲ್ ಡೌನ್ ಆಗಿದೆ.

ಜಿಲ್ಲಾಡಳಿತವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.ಆದರೆ ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಯಾದ ಕಾರಣ ಹೊರಗಿನ ಜಿಲ್ಲೆಯ ಪ್ರವಾಸಿಗರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದು. ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮಂಗಳವಾರ ಹಲವು ಭಕ್ತಾದಿಗಳಿಗೆ ದಂಡ ಹಾಕಲಾಯಿತು.

ಮಂಗಳವಾರ ಆಶ್ಲೇಷಾ ನಕ್ಷತ್ರ ಇರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಚೆಕ್‌ಪೋಸ್ಟ್ ಗಳಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ ವಾಪಸ್ ಕಳುಹಿಸುತ್ತಿದ್ದಾರೆ. ಈ ಮಧ್ಯೆ‌ ಜನರು, ಪೊಲೀಸರ ಮಧ್ಯೆ‌ ವಾಗ್ವಾದಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT