ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಧರ್ಮದೈವ’ ತುಳು ಸಿನಿಮಾ ತೆರೆಗೆ 5ಕ್ಕೆ

Published 2 ಜುಲೈ 2024, 4:47 IST
Last Updated 2 ಜುಲೈ 2024, 4:47 IST
ಅಕ್ಷರ ಗಾತ್ರ

ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಧರ್ಮದೈವ’ ತುಳು ಸಿನಿಮಾ ಜು.5ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ. ಪುಣೆ, ಮುಂಬೈನಲ್ಲಿ ನಡೆದ ಪ್ರೀಮಿಯರ್ ಪ್ರದರ್ಶನದಲ್ಲಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲೀಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರಿಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ’ ಎಂದರು.

ಕಲಾವಿದ ರಮೇಶ್ ರೈ ಕುಕ್ಕುವಳ್ಳಿ ಮಾತನಾಡಿ, ‘ಈ ನಾಡಿನ ರೈತರು ದೈವ- ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆಯಲ್ಲಿ ನಂಬಿಕೆ ಹೊಂದಿದ್ದಾರೆ. ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ಚಿತ್ರ ‘ಧರ್ಮದೈವ’ದಲ್ಲಿ ತಾರಾಗಣದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ, ರೂಪಶ್ರೀ ವರ್ಕಾಡಿ, ದಯಾನಂದ ರೈ ಬೆಟ್ಟಂಪಾಡಿ, ಭರತ್ ಶೆಟ್ಟಿ, ರವಿ ಸಾಲ್ಯಾನ್, ಸಂದೀಪ್ ಪೂಜಾರಿ, ಪುಷ್ಪರಾಜ್ ಬೊಳ್ಳರ್, ರಂಜನ್ ಬೋಳಾರ್, ಕೌಶಿಕ್ ರೈ ಕುಂಜಾಡಿ, ದೀಕ್ಷಾ ಡಿ.ರೈ ಮೊದಲಾದವರು ಅಭಿನಯಿಸಿದ್ದಾರೆ. ಚಿತ್ರ ಕಥೆ- ಸಂಭಾಷಣೆಯನ್ನು ಹಮೀದ್ ಪುತ್ತೂರು ಬರೆದಿದ್ದಾರೆ. ಅರುಣ್ ರೈ ಛಾಯಾಗ್ರಹಣ, ನಿಶಾನ್ ರೈ ಮಠಂತಬೆಟ್ಟು ಹಿನ್ನೆಲೆ ಸಂಗೀತ, ಸಾಹಿತ್ಯ ಕೆ.ಕೆ ಪೇಜಾವರ್, ಸುಮಂತ್ ಬೈಲಾಡಿ, ಹಿನ್ನೆಲೆ ಗಾಯನದಲ್ಲಿ ಪಟ್ಲ ಸತೀಶ್ ಶೆಟ್ಟಿ, ಸಮನ್ವಿ ಆರ್.ರೈ ನುಳಿಯಾಲು ಸಹಕಾರ ನೀಡಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT