ಬಂಟ್ವಾಳ: ಮಂಗಳೂರಿನಿಂದ ಹೊರಟು ಅರ್ಕುಳ ಮೂಲಕ ಬಂಟ್ವಾಳಕ್ಕೆ ಬಂದ ಧರ್ಮಸಂರಕ್ಷಣಾ ಯಾತ್ರೆಯನ್ನು ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸ್ವಾಗತಿಸಲಾಯಿತು.
ಮಹಿಳೆಯರು ಆರತಿ ಬೆಳಗಿದರು. ವೇಳೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ಸೇವಾಂಜಲಿ ಪ್ರತಿಷ್ಠಾನ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಯೋಜನಾಧಿಕಾರಿ ಮಾಧವ ಗೌಡ, ವಕೀಲ ದೀಪಕ್ ಕುಮಾರ್ ಜೈನ್, ಸುಭಾಶ್ಚಂದ್ರ ಜೈನ್, ಡಾ.ಸುದೀಪ್ ಕುಮಾರ್ ಜೈನ್, ಶಿವಶಂಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.