ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Published 5 ಜುಲೈ 2024, 14:23 IST
Last Updated 5 ಜುಲೈ 2024, 14:23 IST
ಅಕ್ಷರ ಗಾತ್ರ

ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ ‘ಧರ್ಮದೈವ’ ತುಳು ಸಿನಿಮಾ ಭಾರತ್ ಸಿನಿಮಾಸ್‌ನಲ್ಲಿ ತೆರೆ ಕಂಡಿತು.

ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ‘ಧರ್ಮದೈವ ಈಗಾಗಲೇ ದೇಶ ವಿದೇಶಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಕಂಡಿದೆ. ನೋಡಿದವರೆಲ್ಲರೂ ಸಿನಿಮಾ ಕುರಿತು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಹಳ ಪರಿಶ್ರಮದಿಂದ ಸಿನಿಮಾ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಆಶೀರ್ವದಿಸಿ’ ಎಂದರು.

ಮುಂಬೈ ಹೇರಂಭ ಇಂಡಸ್ಟ್ರಿಸ್‌ನ ಸಿಎಂಡಿ  ಕನ್ಯಾನ‌ ಕೂಳೂರು ಸದಾಶಿವ ಶೆಟ್ಟಿ  ಮಾತನಾಡಿ, ‘ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ. ಸಿನಿಮಾ ಗೆಲ್ಲಲು ಪ್ರೇಕ್ಷಕರ ಬೆಂಬಲ ಬೇಕೇಬೇಕು’ ಎಂದರು.

ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ‘ಸಿನಿಮಾದಲ್ಲಿ ನಾನು ಟೈಟಲ್ ಹಾಡನ್ನು ಹಾಡಿದ್ದೇನೆ. ತುಳುನಾಡಿನ ಜನರು ಸಿನಿಮಾ ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ’ ಎಂದರು. 

ದೇವದಾಸ್ ಕಾಪಿಕಾಡ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ನಿರ್ಮಾಪಕ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ, ತುಳು ಚಲನ‌ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ಉದ್ಯಮಿ ಕೆ.ಕೆ. ಶೆಟ್ಟಿ, ಪ್ರಮುಖರಾದ ಪ್ರಕಾಶ್ ಪಾಂಡೇಶ್ವರ್, ಸ್ವರಾಜ್ ಶೆಟ್ಟಿ, ರಮೇಶ್ ರೈ ಕುಕ್ಕುವಳ್ಳಿ, ಚೇತನ್ ರೈ ಮಾಣಿ, ಭೋಜರಾಜ್ ವಾಮಂಜೂರು, ಮಲ್ಲಿಕಾ ಪಕಳ, ಇಸ್ಮಾಯಿಲ್ ಮೂಡುಶೆಡ್ಡೆ,  ಪ್ರದೀಪ್ ಆಳ್ವ ಕದ್ರಿ, ಭಾಸ್ಕರ್ ರೈ ಕುಕ್ಕುವಳ್ಳಿ, ದಯಾನಂದ ಕತ್ತಲ್ ಸಾರ್, ಸುಹಾನ್ ಆಳ್ವ, ರೂಪಾ ವರ್ಕಾಡಿ, ಚಂದ್ರಹಾಸ ಆಳ್ವ, ಹೇಮಂತ್ ಸುವರ್ಣ ಇದ್ದರು. ಲಿಖಿತ್ ರೈ ಕಾರ್ಯಕ್ರಮ‌ ನಿರ್ವಹಿಸಿದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT