ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

365 ಶಾಲೆಗಳಿಗೆ ಪೀಠೋಪಕರಣ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮ
Last Updated 5 ಡಿಸೆಂಬರ್ 2022, 5:33 IST
ಅಕ್ಷರ ಗಾತ್ರ

ಧರ್ಮಸ್ಥಳ(ಉಜಿರೆ): ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯ ‘365 ಸರ್ಕಾರಿ ಶಾಲೆಗಳಿಗೆ ಧರ್ಮಸ್ಥಳ ಕ್ಷೇತ್ರದ ವತಿಯಿಂದ ಒಟ್ಟು ₹2.5 ಕೋಟಿ ಮೊತ್ತದ 2,770 ಜೊತೆ ಪೀಠೋಪಕರಣಗಳನ್ನು ಭಾನುವಾರ ವಿತರಿಸಲಾಯಿತು. ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಈ ಪೀಠೋಪಕರಣ ಪೂರೈಕೆಯಾಗಲಿದೆ.

ಪೀಠೋಪಕರಣಗಳನ್ನು ವಿತರಿಸಿ ಮಾತನಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು, ‘ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ, ಸಮುದಾಯ ಅಭಿವೃದ್ಧಿ ವಿಭಾಗದಿಂದ ಪ್ರತಿವರ್ಷ ಸುಮಾರು 400 ಶಾಲೆಗಳಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಪೈಕಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ, ಶಿಕ್ಷಕರ ನೇಮಕಾತಿ, ಶಾಲಾ ಕಟ್ಟಡ, ಆವರಣ ಗೋಡೆ, ಆಟದ ಮೈದಾನ, ಕ್ರೀಡಾ ಸಾಮಗ್ರಿಗಳ ಪೂರೈಕೆ ಮೊದಲಾದ ಸೌಲಭ್ಯ ಒದಗಿಸಲಾಗುತ್ತದೆ’ ಎಂದರು.

ದೀರ್ಘ ಬಾಳಿಕೆ ಬರುವ ಹಾಗೂ ಹಗುರವಾದ ಫೈಬರ್ ಬೆಂಚು, ಡೆಸ್ಕ್‌ಗಳನ್ನು ಶಾಲೆಗಳಿಗೆ ಸಾಗಾಟ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಈ ವರೆಗೆ 10,334 ಶಾಲೆಗಳಿಗೆ 65,144 ಜೊತೆ ಬೆಂಚು, ಡೆಸ್ಕ್‌ಗಳನ್ನು ಪೂರೈಸಲಾಗಿದ್ದು, ಇದಕ್ಕಾಗಿ ₹21.22 ಕೋಟಿ ಅನುದಾನ ನೀಡಲಾಗಿದೆ ಎಂದು ಹೆಗ್ಗಡೆ ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್. ಎಚ್. ಮಂಜುನಾಥ್, ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಸಮುದಾಯ ಅಭಿವೃದ್ಧಿ ವಿಭಾಗದ ಆನಂದ ಸುವರ್ಣ ಮತ್ತು ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT