ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ಶ್ರೀ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ‘ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ಇದೇ 18ರಂದು ಸಂಜೆ 6 ಗಂಟೆಗೆ ಬೆಂಗಳೂರಿನಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.