ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ ಬಸದಿ: ವಿಶೇಷ ಆರಾಧನೆ

Last Updated 10 ಡಿಸೆಂಬರ್ 2021, 16:35 IST
ಅಕ್ಷರ ಗಾತ್ರ

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶುಕ್ರವಾರ ಮಹಾಮಾತೆ ಪದ್ಮಾವತಿ ದೇವಿಯ ನೂತನ ಬಿಂಬ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು.

ಪಂಚಾಮೃತ ಅಭಿಷೇಕ, ಸಹಸ್ರ ನಾಮ ಕುಂಕುಮಾರ್ಚನೆ, ನವಕಲಶಾಭಿಷೇಕ, ಲಕ್ಷ ಹೂವಿನ ಪೂಜೆ, ಪದ್ಮಾವತಿ ದೇವಿ ಆರಾಧನೆ, ಅಷ್ಟಾವಧಾನ ಸೇವೆ ಮೊದಲಾದ ಧಾರ್ಮಿಕ ವಿಧಿಗಳು ನಡೆದವು.

ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ರಾಜೇಂದ್ರ ಕುಮಾರ್ ಮತ್ತು ನೀತಾ ರಾಜೇಂದ್ರ ಕುಮಾರ್ ಮತ್ತು ಶ್ರುತಾ ಜಿತೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT