ಉಜಿರೆ: ಭಜನಾ ಕಮ್ಮಟದಿಂದ ನಮ್ಮ ಸನಾತನ ಧರ್ಮ ಮತ್ತು ಸಮಸ್ಕೃತಿಯ ಅನಾವರಣವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಗುರುದೇವಾನಂದ ಸ್ವಾಮೀಜಿ ಹೇಳಿದರು.

ಧರ್ಮಸ್ಥಳದಲ್ಲಿ ಹಮ್ಮಿಕೊಂಡಿದ್ದ 27ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಅವರು ಆಶೀರ್ವಚನ ನೀಡಿದರು.

ಭಜನೆ ಮತ್ತು ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದ್ದು, ದೃಢಭಕ್ತಿಯಿಂದ ಭಜನೆ ಮಾಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಭಜನೆಯ ಮೂಲಕ ಧರ್ಮ, ಅರ್ಥ, ಕಾಮ ಮತ್ತು ಮೋಕ್ಷ ಎಂಬ ಪುರುಷಾರ್ಥಗಳನ್ನು ಸಾಧಿಸಬಹುದು ಎಂದರು.

ರಾಮಾಯಣ, ಮಹಾಭಾರತದ ಕಥೆಗಳಿಂದ ನಮ್ಮ ಸಾರ್ಥಕ ಬದುಕಿಗೆ ಮಾರ್ಗದರ್ಶನ ಸಿಗುತ್ತಿದೆ. ಭಜನಾ ಕಮ್ಮಟದ ಮೂಲಕ ಹೆಗ್ಗಡೆಯವರು ಹಿಂದೂ ಸಮಾಜದ ಸಂಘಟನೆ ಮತ್ತು ಬಲವರ್ಧನೆಗೆ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ. ಭಜನೆಯಿಂದ ಸಾತ್ವಿಕ ಶಕ್ತಿ ಜಾಗೃತಗೊಂಡು ಭಯ, ದ್ವೇಷ ದೂರವಾಗಿ ಪ್ರೀತಿ-ವಿಶ್ವಾಸ ಮೂಡಿ ಬಂದು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಧರ್ಮ ಮತ್ತು ಸಂಸ್ಕೃತಿ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ಸನಾತನ ಧರ್ಮ ಮತ್ತು ಸಂಸ್ಕೃತಿಯ ಪುನರುತ್ಥಾನದೊಂದಿಗೆ ಏಕತೆ ಮತ್ತು ಏಕಾಗ್ರತೆ ಸಾಧಿಸಲು ಭಜನೆ ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳು ಭಜನೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತೋಷವಾಗಿದೆ. ಭಜನಾಪಟುಗಳು ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕುಂದಾಪುರದ ಕೃಷ್ಣ ಪೂಜಾರಿ, ನೆಲ್ಯಾಡಿಯ ಭವಿಷ್ಯ ಕಮ್ಮಟದ ಕುರಿತು ಮಾತನಡಿದರು.

ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್ ಭಾಗವಹಿಸಿದ್ದರು.

ಕಮ್ಮಟದ ಕಾರ್ಯದರ್ಶಿ ಎ.ವಿ.ಶೆಟ್ಟಿ ವರದಿ ಸಾದರಪಡಿಸಿದರು. ಸುಬ್ರಹ್ಮಣ್ಯಪ್ರಸಾದ್ ಸ್ವಾಗತಿಸಿದರು. ಚಂದ್ರಶೇಖರ ಸಾಲ್ಯಾನ್ ವಂದಿಸಿದರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ವಿದುಷಿ ಚೈತ್ರಾ ನಿರ್ದೇಶನದಲ್ಲಿ ನೃತ್ಯ ಭಜನೆ, ಕುಣಿತ ಭಜನೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.