ಮಂಗಳೂರು: ಧರ್ಮಸ್ಥಳ ಬೆಳವಣಿಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ದ ಮುಖ್ಯಸ್ಥ ಪ್ರಣವ್ ಮೊಹಂತಿ ಶುಕ್ರವಾರ ಬೆಳ್ತಂಗಡಿಯ ಕಚೇರಿಗೆ ಭೇಟಿ ನೀಡಿ, ತಂಡದವರ ಜೊತೆ ಚರ್ಚಿಸಿದರು.

ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಜಯಂತ್ ಟಿ. ಹಾಗೂ ಆತನ ಹೇಳಿಕೆಯ ವಿಡಿಯೊ ಚಿತ್ರೀಕರಿಸಿದ್ದ ಯೂಟ್ಯೂಬರ್ ಅಭಿಷೇಕ್ ವಿಚಾರಣೆ ಸತತ ಮೂರನೇ ದಿನವಾದ ಶುಕ್ರವಾರವೂ ಮುಂದುವರಿಯಿತು. ಗುರುವಾರ ತಡರಾತ್ರಿ 2.30ರವರೆಗೆ ಅಧಿಕಾರಿಗಳು ಜಯಂತ್ಅವರ ವಿಚಾರಣೆ ನಡೆಸಿದ್ದರು.

‘ಸಾಕ್ಷಿ ದೂರುದಾರ ನೀಡಿದ್ದ ಸಂದರ್ಶನ, ಆತನ ಬಂಧನದ ನಂತರ ಕೆಲ ಯೂಟ್ಯೂಬ್ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಆತನ ವಿಡಿಯೊವೊಂದನ್ನು ಅಭಿಷೇಕ್ ಚಿತ್ರೀಕರಿಸಿದ್ದರು’ ಎಂದು ಮೂಲಗಳು ತಿಳಿಸಿವೆ.

‘ಗಿರೀಶ ಮಟ್ಟೆಣ್ಣವರ ವಿಚಾರಣೆಗೆ ಹಾಜರಾಗಿದ್ದು, ಅವರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಸಮಗ್ರ ಮಾಹಿತಿ ಸಂಗ್ರಹ ಹಾಗೂ ಸತ್ಯಾಸತ್ಯತೆ ಪರಿಶೀಲನೆಗಾಗಿ ಕೂಲಂಕಷ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿವೆ.

‘ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾರನ್ನೂ ಬಂಧಿಸಿಲ್ಲ. ಬಂಧನ ಕುರಿತು ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ’ ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.