ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸೆ.17 ಮತ್ತು 18ರಂದು ಸಿಕ್ಕಿರುವ ಬುರುಡೆಗಳು, ಮೂಳೆಗಳು ಪುರುಷರವು ಎಂದು ಎಸ್ಐಟಿ ಮೂಲಗಳು ತಿಳಿಸಿವೆ.

ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ಮಹಜರು ನಡೆಸಿದ ಸಂದರ್ಭದಲ್ಲಿ ಏಳು ತಲೆಬುರುಡೆ ಮತ್ತು ಬಹಳಷ್ಟು ಮೂಳೆಗಳು ಸಿಕ್ಕಿದ್ದವು. ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವೈದ್ಯರ ಪ್ರಾಥಮಿಕ ವರದಿ ಪ್ರಕಾರ ಅವೆಲ್ಲವೂ ಪುರುಷರವು ಎಂದು ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.

ಒಂದು ಬುರುಡೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಯು.ಬಿ ಅಯ್ಯಪ್ಪ ಅವರದು ಎಂದು ಪ್ರಾಥಮಿಕ ತನಿಖೆಯಲ್ಲಿ ಗುರುವಾರ ಪತ್ತೆಯಾಗಿತ್ತು. ಎಲ್ಲ ಬುರುಡೆಗಳ ಮಾಹಿತಿ ಕಲೆ ಹಾಕಲು ಪ್ರಯತ್ನಿಸುತ್ತಿದ್ದು ವಿಸ್ತೃತ ತನಿಖೆಯಲ್ಲಿ ಪೂರ್ಣ ಮಾಹಿತಿ ಲಭ್ಯವಾಗಲಿದೆ.

ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ಮಾಹಿತಿ ಕಲೆ ಹಾಕುವ ಪ್ರಕ್ರಿಯೆಯ ಭಾಗವಾಗಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವ ಗೌಡ ಅವರನ್ನು ಎಸ್ಐಟಿ ಶುಕ್ರವಾರ ಬೆಳಿಗ್ಗೆ ವಿಚಾರಣೆಗೆ ಒಳಪಡಿಸಿದೆ.

ಬೆಳ್ತಂಗಡಿಯಲ್ಲಿ ಇರುವ ಎಸ್ಐಟಿ ಕಚೇರಿಗೆ ತೆರಳಿ ಇಬ್ಬರೂ ಮಾಹಿತಿ ನೀಡಿದ್ದಾರೆ. ಗ್ರಾಮದಲ್ಲಿ ಹೂತುಹಾಕಿದ ಮೃತದೇಹಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.