ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳಕ್ಕೆ ಬಂದಿದ್ದ ವೃದ್ಧೆಯೊಬ್ಬರಿಗೆ ಅಪರಿಚಿತ ನೊಬ್ಬ ಮತ್ತು ಬರಿಸುವ ಪಾನೀಯ ಕುಡಿಸಿ ನಗ, ನಗದು ಅಪಹರಿಸಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಬೆಂಗಳೂರಿನ ಜೆ.ಪಿ.ನಗರ ನಿವಾಸಿ ಪ್ರೇಮಾ ಕೆ. (70) ಅವರು ಮೇ 25ರಂದು ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದರು. ಅಂದು ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ತೆರಳಲು ರಾತ್ರಿ 9.45ಕ್ಕೆ ಧರ್ಮಸ್ಥಳ ಪ್ರವೇಶದ್ವಾರದ ಬಳಿಯ ಕೆಎಸ್ಆರ್ಟಿಸಿ ಬಸ್ ತಂಗುದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದಾ ಅಪರಿಚಿತ ವ್ಯಕ್ತಿಯೊಬ್ಬ ಬಂದು ಲಡ್ಡುಪ್ರಸಾದ, ಪಾನೀಯ ನೀಡಿದ್ದ. ಬಳಿಕ ಅಸ್ವಸ್ಥರಾಗಿದ್ದು, ಅವರ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಅಪಹರಿಸಿ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಸ್ವಸ್ಥರಾದ ಪ್ರೇಮಾ ಅವರನ್ನು ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ತಮ್ಮ ಪರ್ಸ್ನಲ್ಲಿದ್ದ 12 ಗ್ರಾಂನ ಚಿನ್ನದ ಮುತ್ತಿನಹಾರ, 80 ಗ್ರಾಂನ ಮಾಂಗಲ್ಯ ಸರ, 20 ಗ್ರಾಂನ ಚಿನ್ನದ ಬಳೆ ಮತ್ತು ₹7 ಸಾವಿರ ನಗದು ಸೇರಿದಂತೆ ಸುಮಾರು ₹10 ಲಕ್ಷ ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ಪ್ರೇಮಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-1646923157

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.