ಉಜಿರೆ: ಧರ್ಮಸ್ಥಳದ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ಸುಳ್ಳು ವದಂತಿ, ಅಪಪ್ರಚಾರ ಪ್ರಕಟವಾಗುತ್ತಿದ್ದು, ಇದು ಖಂಡನೀಯ. ಭಕ್ತರು ಹಾಗೂ ಅಭಿಮಾನಿಗಳಲ್ಲಿ ಗೊಂದಲ ಉಂಡಾಗಿದ್ದು, ಕೇಂದ್ರ ಸರ್ಕಾರ ಸಿಬಿಐ ಅಥವಾ ಎನ್ಐಎ ಮೂಲಕ ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ರಾಜ್ಯ ಪರಿಷತ್ನ ಅಧ್ಯಕ್ಷ ಸಂಪತ್ಕುಮಾರ್ ಒತ್ತಾಯಿಸಿದರು.

ಗುರುವಾರ ಧರ್ಮಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ರಾಜ್ಯಪಾಲರಿಗೂ ಮನವಿ ಸಲ್ಲಿಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಅಪಪ್ರಚಾರದಿಂದಾಗಿ ಜನರ ಧಾರ್ಮಿಕ ನಂಬಿಕೆ ಹಾಗೂ ಹಕ್ಕುಗಳಿಗೆ ಧಕ್ಕೆಯಾಗಿದೆ. ರಾಜ್ಯಸರ್ಕಾರದ ವಿಶೇಷ ತನಿಖಾ ತಂಡದ ತನಿಖೆ ಸಮಂಜಸವಾಗಿದ್ದು, ಶೀಘ್ರವೇ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಬೇಕು ಎಂದು ಅವರು ಕೋರಿದರು.

ಪರಿಷತ್ ಸದಸ್ಯರಾದ ಶೇಖರ ಗೌಡ ಪಾಟೀಲ, ರವಿ, ಲಕ್ಷ್ಮಣ ಗೌಡ, ಪೆರುಮಾಳ್, ಪುಷ್ಪಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.