ಬುಧವಾರ, ಏಪ್ರಿಲ್ 1, 2020
19 °C

ಧರ್ಮಸ್ಥಳ: ಕಂಬಳ ಓಟಗಾರ ಶ್ರೀನಿವಾಸ ಗೌಡರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ‘ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದ ತಮ್ಮ ನಿವಾಸದಲ್ಲಿ ಸೋಮವಾರ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡುಬಿದಿರೆಯ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅವರು ಅಭಿನಂದಿಸಿದರು.

‘ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಮನೊನಿಯಂತ್ರಣ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟ್ ಧರಿಸಬಾರದು. ಬಿಳಿ ಧೋತಿ ಉಡಬೇಕು’ ಎಂದು ಹೊಸ ಧೋತಿಯನ್ನು ಉಡುಗೊರೆಯಾಗಿ ನೀಡಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲೀಕ ಸತೀಶ್ಚಂದ್ರ ಸಾಲಿಯಾನ್ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರಾದ ಜ್ವಾಲಾಪ್ರಸಾದ್ ಈದು, ಸುಭಾಶ್ಚಂದ್ರ ಚೌಟ,  ಎ.ಪಿ.ಎಂ.ಸಿ. ಅಧ್ಯಕ್ಷ ಪ್ರವೀಣ ಕುಮಾರ್ ಜೈನ್, ಚಿಂತನ್ ಲೋಬೊ, ತರಬೇತಿದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)