ಉಜಿರೆ: ಪಜಿರಡ್ಕದ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.5ರಂದು ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭವನ್ನು ಗುರುವಾರ ಧರ್ಮಸ್ಥಳದಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು.

ಮುಖ್ಯ ಪ್ರವೇಶದ್ವಾರದ ಬಳಿ ದೇವಸ್ಥಾನದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆ ಅವರ ಆಪ್ತಕಾರ್ಯದರ್ಶಿ ಎ.ವಿ.ಶೆಟ್ಟಿ, ಲೆಕ್ಕಪತ್ರವಿಭಾಗದ ಮುಖ್ಯಸ್ಥ ಪುರಂದರ ಭಟ್, ಜಮಾ ಉಗ್ರಾಣದ ನಿವೃತ್ತ ಮುತ್ಸದ್ಧಿ ಭುಜಬಲಿ ಧರ್ಮಸ್ಥಳ, ದೇವಳದ ನೌಕರರು ಹಾಗೂ ಊರಿನ ನಾಗರಿಕರು ಸ್ವಾಗತ ಕೋರಿದರು.

ಶಾಸಕ ಹರೀಶ್ ಪೂಂಜ, ಮುಖಂಡ ರಕ್ಷಿತ್ ಶಿವರಾಂ ಭಾಗವಹಿಸಿದ್ದರು.

ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ, ದೇವಸ್ಥಾನದ ಪ್ರಧಾನ ಅರ್ಚಕರು ಪ್ರಾರ್ಥನೆ ಸಲ್ಲಿಸಿ ಫಲಪುಷ್ಪ ಹಾಗೂ ಹಾರವನ್ನು ಸಮರ್ಪಿಸಿದರು. ಬಳಿಕ ಭಕ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.