ಮಂಗಳೂರು: ‘ಡಿಜಿಟಲ್ ಅರೆಸ್ಟ್ ನೆಪದಲ್ಲಿ ಇಲ್ಲಿನ ವೃದ್ಧ ಮಹಿಳೆಯೊಬ್ಬರಿಂದ ₹ 3.16 ಕೋಟಿ ಪಡೆದು ವಂಚಿಸಿದ ಬಗ್ಗೆ ನಗರದ ಸೆನ್ ಅಪರಾಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಂಚನೆ ಪ್ರಮಾಣವು ₹ 3 ಕೋಟಿ ಮೀರಿರುವುದರಿಂದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

‘ಜೂನ್ 6ರಂದು ಕರೆ ಮಾಡಿದ್ದ ವ್ಯಕ್ತಿಯು ತನ್ನನ್ನು ಮುಂಬೈನ ಪೊಲೀಸ್ ಇನ್ಸ್ಪೆಕ್ಟರ್ ಅನು ಶರ್ಮಾ ಎಂದು ಪರಿಚಯಿಸಿಕೊಂಡ. ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದ. ನನ್ನ ಗಂಡನ ಹೆಸರಿನಲ್ಲಿ ಖರೀದಿಸಿದ ಸಿಮ್ನಿಂದ ವಂಚನೆ ಕರೆಗಳನ್ನು ಮಾಡಿರುವ ಬಗ್ಗೆ ಸಹಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದ. ನಂತರ ಆ ಠಾಣೆಯ ಸಬ್ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಎಂದು ಹೇಳಿಕೊಂಡು ಮಾತನಾಡಿದ ವ್ಯಕ್ತಿ ನನ್ನ ಬ್ಯಾಂಕ್ ಖಾತೆಗಳ ಮಾಹಿತಿ ಪಡೆದುಕೊಂಡ. ಆ ಬಳಿಕ ಪಬ್ಲಿಕ್ ಪ್ರಾಸಿಕ್ಯೂಟರ್ ದೀಪಕ್ ವೆಂಕಟರಮಣ ಎಂದು ಹೇಳಿಕೊಂಡ ವ್ಯಕ್ತಿ ನನ್ನ ಮತ್ತು ಅವರ ಗಂಡನ ಬ್ಯಾಂಕ್ ಖಾತೆಗಳ ವಿವರ ಪಡೆದುಕೊಂಡ.’

‘ಬ್ಯಾಂಕ್ ಖಾತೆಗಳ ಪರಿಶೀಲನೆಗಾಗಿ ಹಣ ಕಟ್ಟಬೇಕು. ಅದನ್ನು ಮರಳಿಸುತ್ತೇವೆ. ವಿಷಯವನ್ನು ಯಾರಿಗೂ ತಿಳಿಸಬಾರದು ಎಂದು ಸೂಚಿಸಿದ್ದರು. ಅವರ ಸೂಚನೆ ಪ್ರಕಾರ ಜೂನ್ 10ರಿಂದ 27ರ ವರೆಗೆ ಹಂತ ಹಂತವಾಗಿ ₹ 3,16,52,142 ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿದ್ದೆ. ಬಳಿಕ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಆತಂಕದಿಂದ ಮಕ್ಕಳಿಗೆ ವಿಷಯವನ್ನು ತಿಳಿಸಿದಾಗ, ನಾನು ವಂಚನೆಗೆ ಒಳಗಾಗಿದ್ದು ಗೊತ್ತಾಯಿತು ಎಂದು ನಿವೃತ್ತ ಉದ್ಯೋಗಿಯಾಗಿರುವ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.