ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರಿನ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದರೆ, ಅಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ನೆರವನ್ನು ನೀಡಲಾಗುವುದು ಎಂದು ಕಂದಾಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ವಿಭಾಗದ ಪ್ರಧಾನ ಕಾರ್ಯದರ್ಶಿ ರಾಜ್ಕುಮಾರ್ ಖತ್ರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಮುಂಗಾರಿನ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪಗಳ ಅನುಭವದಿಂದಾಗಿ ಈ ಬಾರಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಹಾಗೂ ಯೋಜನೆಗಳನ್ನು ರೂಪಿಸಿದೆ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ರೂಪಿಸಿರುವ ಸಾಫ್ಟ್ವೇರ್ ಕೂಡ ಉತ್ತಮವಾಗಿದೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಳೆಗಾಲಕ್ಕೆ ಮುನ್ನವೇ ಅಗ್ನಿ ಶಾಮಕ ದಳ ಸಜ್ಜಾಗಿರುವುದನ್ನು ಪರಿಶೀಲಿಸಿದ ಅವರು, ಉತ್ತಮವಾಗಿ ಕಾರ್ಯನಿರ್ವಹಿಸಿ ಎಂದರು.

ರಾಷ್ಟ್ರೀಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳ ಎಂಜಿನಿಯರ್ಗಳ ಸಭೆಯನ್ನು ಬೆಂಗಳೂರಿನಲ್ಲಿ ಕರೆಯಲಾಗಿದ್ದು, ಅವರು ತೆಗೆದುಕೊಂಡ ಕ್ರಮಗಳ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲು ಸೂಚಿಸುವುದಾಗಿ ಹೇಳಿದರು.

ಪ್ರಾದೇಶಿಕ ಆಯುಕ್ತ ಟಿ.ಕೆ. ಅನಿಲ್ ಕುಮಾರ್ ಮಾತನಾಡಿ, ಪ್ರವಾಹ ಸಾಧ್ಯತೆ ಇರುವ ಪ್ರದೇಶಗಳ ಜನರಿಗೆ ಸನ್ನದ್ಧತೆಯ ಬಗ್ಗೆ ಮಾಹಿತಿ ನೀಡಬೇಕು. ವಿಕೋಪ ನಿರ್ವಹಿಸಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಜನರಿಗೆ ಮಾಹಿತಿ ನೀಡಬೇಕು. ನಗರದಲ್ಲಿ ಕೃತಕ ನೆರೆ ತಪ್ಪಿಸಲು ಎಲ್ಲ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಸಲಹೆ ಮಾಡಿದರು.

ಹವಾಮಾನ ಇಲಾಖೆಯ ನಿರ್ದೇಶಕ ಡಾ. ಶ್ರೀನಿವಾಸಯ್ಯ, ಮುಂಗಾರು ವೇಳೆ ಕರಾವಳಿಯ ಜನರು ‘ಸಿಡಿಲು ಆಪ್’ ಬಳಸಿಕೊಳ್ಳುವ ಮೂಲಕ ಯಾವ ಪ್ರದೇಶಗಳಲ್ಲಿ ಸಿಡಿಲು– ಗುಡುಗು ಸಂಭವಿಸಲಿದೆ ಎಂಬುದನ್ನು ತಿಳಿಯಬಹುದು. ಮಳೆಯ ಮಾಹಿತಿ, ಹವಾಮಾನ ಮುನ್ಸೂಚನೆಯನ್ನೂ ಪಡೆಯಬಹುದು ಎಂದು ಹೇಳಿದರು.

ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಮಾತನಾಡಿ, ಜಿಲ್ಲಾಡಳಿತ ಪ್ರಸಕ್ತ ಸಾಲಿನ ಮುಂಗಾರಿಗೆ ಸಮನ್ವಯದಿಂದ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.

ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್, ಮುಂಗಾರನ್ನು ಎದುರಿಸಲು ಈಗಾಗಲೇ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಹಾಗೂ ಮಾನವೀಯವಾಗಿ ಕೈಗೊಳ್ಳಲಾಗಿರುವ ಕ್ರಮಗಳನ್ನು ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್., ಹೆಚ್ಚುವರಿ ಜಿಲ್ಲಾಧಿಕಾರಿ ವೆಂಕಟಾಚಲಪತಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.