ಮಂಗಳೂರು: ‘ಕರ್ನಾಟಕದಲ್ಲಿ ಗೇರು ಕೃಷಿಯನ್ನು ಹೆಚ್ಚಿನ ಪ್ರದೇಶಗಳಿಗೆ ವಿಸ್ತರಣೆ ಮಾಡುವ ವಿಚಾರವಾಗಿ ಸದ್ಯದಲ್ಲೇ ಸಭೆಯೊಂದನ್ನು ಕರೆದು ಚರ್ಚಿಸಲಾಗುವುದು’ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಭಾನುವಾರ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೇರು ಸಂಸ್ಕರಣಾ ಉದ್ಯಮಕ್ಕೆ 100 ವರ್ಷ ತುಂಬಿದ ಸಲುವಾಗಿ ಕರ್ನಾಟಕ ಗೇರು ಉತ್ಪಾದಕರ ಸಂಘ ನಗರದಲ್ಲಿ ಏರ್ಪಡಿಸಿದ್ದ ಮೂರು ದಿನಗಳ ‘ಗೋಡಂಬಿ ಶತಮಾನೋತ್ಸವ ಶೃಂಗ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಗೇರು ಕೃಷಿಗೆ ಪುನಶ್ಚೇತನ ನೀಡಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂಬ ಶಾಸಕ ವೇದವ್ಯಾಸ ಕಾಮತ್ ಅವರ ಕೋರಿಕೆಗೆ ಉತ್ತರಿಸಿದ ಅವರು, ‘ಅರಣ್ಯ, ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಲಾಗುವುದು. ಗೇರು ಕೃಷಿಯನ್ನು ಯಾವ ಬಗೆಯಲ್ಲಿ ಬೆಳೆಸಬಹುದು ಎಂಬುದರ ಕುರಿತು ವರದಿ ಸಲ್ಲಿಸಲು ಸೂಚಿಸಲಾಗುವುದು. ಮುಂದಿನ ಬಜೆಟ್ನಲ್ಲಿ ಯೋಜನೆಯನ್ನು ಘೋಷಿಸು ವಂತೆ ಮಾಡಲು ಪ್ರಯತ್ನಿಸ ಲಾಗುವುದು’ ಎಂದು ಭರವಸೆ ನೀಡಿದರು.

ಶಾಸಕರಾದ ಮಂಜುನಾಥ ಭಂಡಾರಿ, ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಐವನ್ ಡಿಸೋಜ, ಕಿಶೋರ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯಕಾರ್ಯನಿರ್ಹವಣಾಧಿಕಾರಿ
ಎಸ್.ಎಸ್ ಅನಿಲ್ ಕುಮಾರ್, ಕರ್ನಾಟಕ ಗೇರು ಉತ್ಪಾದಕರ ಸಂಘದ ಅಧ್ಯಕ್ಷ ಎಸ್.ಎ ರಾವ್, ಸಂಚಾಲಕ ಪ್ರಕಾಶ್ ಕಲ್ಭಾವಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.