ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿ ವೇಷ ಕುಣಿತಕ್ಕ ಷರತ್ತು ಬದ್ಧ ಅನುಮತಿ

Last Updated 13 ಅಕ್ಟೋಬರ್ 2020, 15:06 IST
ಅಕ್ಷರ ಗಾತ್ರ

ಮಂಗಳೂರು: ದಸರಾ ಹಬ್ಬದಲ್ಲಿ ಹುಲಿವೇಷ ಕುಣಿತಕ್ಕೆ ಷರತ್ತು ಬದ್ಧ ಅನುಮತಿ ನೀಡಲು ಜಿಲ್ಲಾ ಧಾರ್ಮಿಕ ಪರಿಷತ್ ಸಭೆ ನಿರ್ಧರಿಸಿದೆ.

ಜಿಲ್ಲಾ ಧಾರ್ಮಿಕ ಪರಿಷತ್‌ ಸಭೆ ಮಂಗಳವಾರ ನಡೆದಿದ್ದು, ಕೋವಿಡ್–19 ಹಿನ್ನೆಲೆಯಲ್ಲಿ ದಸರಾ ಹಬ್ಬದಲ್ಲಿ ದೇವಸ್ಥಾನದ ಆವರಣದೊಳಗೆ ಮಾತ್ರ ಗರಿಷ್ಠ 10 ಹುಲಿ ವೇಷಧಾರಿಗಳು ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ಈ ರೀತಿ ಹರಕೆ ಸಲ್ಲಿಸುವಾಗ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ. ಯಾವುದೇ ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ದೇವಳದ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹುಲಿ ವೇಷಧಾರಿಗಳು ದೇವಸ್ಥಾನದ ಹೊರಗೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವುದನ್ನು ನಿರ್ಬಂಧಿಸಲಾಗಿದೆ. ಅಲ್ಲದೇ, ಪಟಾಕಿ ಮತ್ತು ಸುಡುಮದ್ದುಗಳನ್ನೂ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT