ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ

Last Updated 24 ಜನವರಿ 2020, 16:01 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ 10 ಮಂದಿ ಸರ್ಕಾರಿ ನೌಕರರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಕೃಷ್ಣ ರಾವ್, ಮಂಗಳೂರು ಕಾರ್ಮಿಕ ಅಧಿಕಾರಿ ವಿಲ್ಮ ಎಲಿಜಬೆತ್ ತೌವ್ರೋ, ಮಂಗಳೂರು ಉಪತಹಶೀಲ್ದಾರರು ವತ್ಸಲಾ, ಸುಳ್ಯ ತಾಲ್ಲೂಕು ಕಚೇರಿ ಕಂದಾಯ ನಿರೀಕ್ಷಕರು ಕೊರಗಪ್ಪ, ಕಲ್ಲಮುಂಡ್ಕೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಉಗ್ಗಪ್ಪ ಮೂಲ್ಯ, ಮಂಗಳೂರಿನ ಸಹಾಯಕ ಎಂಜಿನಿಯರ್ ಆನಂದ ಎಸ್. ಬಂಜನ್, ವೆಲ್ನಾಕ್‌ ಶುಶ್ರೂಷಕಿ ಸುಮಂಗಲಾ, ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರತ್ನಾಕರ ಕೊಠಾರಿ, ಮಂಗಳೂರಿನ ಹಿರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯದ ಶಿರೆಸ್ತೇದಾರ್ ಪ್ರಕಾಶ್ ನಾಯಕ್, ಕೃಷಿ ಇಲಾಖೆ ಹಿರಿಯ ವಾಹನ ಚಾಲಕ ಎಂ. ದೇವದಾಸ ಆಯ್ಕೆಯಾಗಿದ್ದಾರೆ.

ಇದೇ 26 ರಂದು ನೆಹರೂ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನ ಮಾಡಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT