ಮಂಗಳೂರು: ದ್ವಿತೀಯ ಪಿ.ಯು. ಗಣಿತ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 65 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಂದ ಒಟ್ಟು 13,732 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದರು. ಅವರಲ್ಲಿ 29 ಮಂದಿ ಪರೀಕ್ಷೆಗೆ ಹಾಜರಾಗಿಲ್ಲ.
ಪುನರಾವರ್ತಿತ ಪರೀಕ್ಷೆ ಬರೆಯಬೇಕಾಗಿದ್ದ 238 ವಿದ್ಯಾರ್ಥಿಗಳಲ್ಲಿ 36 ಮಂದಿ ಗೈರಾಗಿದ್ದಾರೆ.
‘ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ನಡೆದ ಬಗ್ಗೆ ವರದಿಯಾಗಿಲ್ಲ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಜಯಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.