ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಾಂಧರ ಕೈಗೆ ಅಧಿಕಾರ ಕೊಡದಿರಿ: ಸಚಿವ ಆರ್‌.ಬಿ.ತಿಮ್ಮಾಪುರ

Published 30 ನವೆಂಬರ್ 2023, 15:49 IST
Last Updated 30 ನವೆಂಬರ್ 2023, 15:49 IST
ಅಕ್ಷರ ಗಾತ್ರ

ಪುತ್ತೂರು: ಚುನಾವಣೆಯ ಸಂದರ್ಭದಲ್ಲಿ ದೇಶದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಅಧಿಕಾರಕ್ಕೇರುವ ಕೆಲವು ರಾಜಕೀಯ ಪಕ್ಷಗಳು ಮತಾಂಧತೆಯನ್ನು ಬೋಧಿಸುತ್ತವೆ. ಅವರಿಗೆ ನಾವು ಅಧಿಕಾರ ಕೊಡಬಾರದು ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.

ಪುತ್ತೂರು ಶಾಸಕರ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.‌

ಬಿಜೆಪಿಗೆ ಅಭಿವೃದ್ದಿ ಬೇಕಾಗಿಲ್ಲ. ಅವರು ಜನರ ಮನಸ್ಸನ್ನು ಒಡೆಯುವ ಮೂಲಕ ಅಧಿಕಾರಕ್ಕೇರುವ ಪ್ರಯತ್ನವನ್ನು ಮಾಡುತ್ತಾರೆ. ಅದನ್ನು ಕಾಂಗ್ರೆಸ್‌ನ ಜಾತ್ಯತೀತ ಮನಸ್ಸುಗಳು ತಡೆಯಬೇಕು. ಮುಂದಿನ ಲೋಕಸಭಾ ಚುನಾವಣೆಗೆ ಈಗಲೇ ತಯಾರಿ ಮಾಡಿಕೊಳ್ಳಬೇಕು. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದರು.

ಶಾಸಕ ಅಶೋಕ್‌ಕುಮಾರ್‌ ರೈ ಅವರು ಆರ್.ಬಿ.ತಿಮ್ಮಾಪುರ ಅವರನ್ನು ಗೌರವಿಸಿದರು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಎಂ.ಎನ್ ರಾಜೇಂದ್ರಕುಮಾರ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT