ಶನಿವಾರ, ಜುಲೈ 24, 2021
27 °C

ನಾಯಿಗೆ ಗುಂಡು: ನೋಟಿಸ್ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಕದ್ರಿ ಶಿವಬಾಗ್‌ನಲ್ಲಿ ಬೀದಿನಾಯಿಯನ್ನು ಗುಂಡಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಅನಿಲ್ ಸೋನ್ಸ್‌ಗೆ ಕದ್ರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ನಾಯಿಯನ್ನು ಗುಂಡಿಕ್ಕಿ ಕೊಲ್ಲಲು ಕಾರಣ ಏನು ಎಂಬ ಬಗ್ಗೆ ಠಾಣೆಗೆ ಹಾಜರಾಗಿ ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಆರೋಪಿ ನೀಡುವ ಕಾರಣ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ1ರ ಸಂಜೆ 5 ಗಂಟೆಗೆ ಕದ್ರಿ ಶಿವಭಾಗ್‌ನ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿತ್ತು. ನಾಯಿಯ ಮೇಲೆ ರಕ್ತ ಇರುವ ಬಗ್ಗೆ ಎನಿಮಲ್ ಕೇರ್ ಟ್ರಸ್ಟ್‌ನವರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು. ಅದರಂತೆ ಟ್ರಸ್ಟ್‌ನ ಸುಮಾ ಆರ್. ನಾಯಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಯಿಯ ಮರಣೋತ್ತರ ಪರೀಕ್ಷೆ ನಡೆಸಿದಾಗ ದೇಹದಲ್ಲಿ ಗುಂಡಿನಂತಹ ವಸ್ತು ಪತ್ತೆಯಾಗಿದ್ದು, ಏರ್‌ಗನ್‌ನಿಂದ ಗುಂಡು ಹೊಡೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿತ್ತು. ದೂರುದಾರರು ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ ಮೇಲೆ ಸಂಶಯ ವ್ಯಕ್ತಪಡಿಸಿ, ದೂರಿನಲ್ಲಿ ದಾಖಲಿಸಿದ್ದನ್ನು ಆಧರಿಸಿ, ಪೊಲೀಸರು ನೋಟಿಸ್ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.