ಮಂಗಳವಾರ, ಜೂನ್ 15, 2021
27 °C
ಗ್ರಾಮಗಳಲ್ಲಿ ಹೆಚ್ಚುತ್ತಿರುವ ಸೋಂಕು: ಬೆಳ್ತಂಗಡಿಯಲ್ಲಿ ಪ್ರಯೋಗ

ಮನೆಗಳಿಗೆ ತೆರಳಿ ಗಂಟಲು ದ್ರವ ಸಂಗ್ರಹ: ಬೆಳ್ತಂಗಡಿಯಲ್ಲಿ ಪ್ರಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ಗ್ರಾಮಗಳಲ್ಲಿ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಿಸಲು ತಾಲ್ಲೂಕಿನ ಎಂಟು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸಂಚಾರಿ ಗಂಟಲು ದ್ರವ ಸಂಗ್ರಹ ವಾಹನಗಳ ಸಂಚಾರ ಪ್ರಾರಂಭಿಸಲಾಗಿದೆ.

‘ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುವುದನ್ನು ತಡೆಯಲು ಈ ವ್ಯವಸ್ಥೆ ಸಹಕಾರಿಯಾಗಲಿದೆ. ರೋಗ ಲಕ್ಷಣ ಕಂಡುಬಂದವರು, ಪ್ರಥಮ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರ ಪರೀಕ್ಷೆ ನಡೆಸಲಾಗುತ್ತದೆ' ಎಂದು ಶಾಸಕ ಹರೀಶ್‌ ಪೂಂಜ ತಿಳಿಸಿದರು.

‘ಪ್ರತಿ ವಾಹನದಲ್ಲಿ ಚಾಲಕ, ಡಾಟಾ ನೋಂದಣಿ ಸಿಬ್ಬಂದಿ, ತಂತ್ರಜ್ಞರು ಇರಲಿದ್ದಾರೆ. ಮಧ್ಯಾಹ್ನದ ಒಳಗೆ ಗಂಟಲು ದ್ರವ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗುತ್ತದೆ. ಇದರಿಂದ ವರದಿಯೂ ಶೀಘ್ರ ದೊರೆಯುತ್ತದೆ. ತಾಲ್ಲೂಕು ಆರೋಗ್ಯ ಇಲಾಖೆ ಕೋರಿಕೆ ಮೇರೆಗೆ ವಾಹನದ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಲಾಮಧು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು