ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರುಕೆಸರು ಮಿಶ್ರಿತ: ಆರೋಪ

Last Updated 26 ಅಕ್ಟೋಬರ್ 2021, 3:41 IST
ಅಕ್ಷರ ಗಾತ್ರ

ಸುಳ್ಯ: ಇಲ್ಲಿನ ಪಟ್ಟಣದ ವ್ಯಾಪ್ತಿಯಲ್ಲಿ ಪಂಚಾಯತಿ ವತಿಯಿಂದ ಸರಬರಾಜಾಗುವ ಕುಡಿಯುವ ನೀರು ಕೆಸರು ಮಿಶ್ರಿತವಾಗಿದ್ದು ಕೆಂಪು ಬಣ್ಣದ ನೀರು ಬರುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕೆಲವು ದಿನಗಳಿಂದ ಈ ರೀತಿಯ ಕೆಂಪು ಮಿಶ್ರಿತ ನೀರು ಪೂರೈಕೆಯಾಗುತ್ತಿದೆ. ಈ ನೀರನ್ನು ಕುಡಿಯಲು ಮತ್ತು ಮನೆ ಬಳಕೆ ಬಳಸಲು ಆಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಎರಡು ದಿನಗಳಿಂದ ವಿಪರೀತ ಮಳೆ ಸುರಿಯುವ ಕಾರಣ ಪಯಸ್ವಿನಿ ನದಿಯಲ್ಲಿ ಕೆಸರು ಮಿಶ್ರಿತ ನೀರು ಬರುತ್ತಿದೆ. ಇದರಿಂದ ಸಮಸ್ಯೆ ಆಗಿದೆ ಎಂದು ಪಂಚಾಯತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದ್ದಾರೆ. ಬೇಡಿಕೆಗೆ ತಕ್ಕಂತೆ ನೀರನ್ನು ಶುದ್ಧೀಕರಿಸಿ ನೀಡುವಷ್ಟು ಸಾಮರ್ಥ್ಯ ಈಗಿನ ಶುದ್ಧೀಕರಣ ಘಟಕಕ್ಕೆ ಇಲ್ಲ. ಹೀಗಾಗಿ ಪೂರ್ತಿಯಾಗಿ ಶುದ್ಧೀಕರಣ ಮಾಡಿ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಪೂರ್ತಿ ಶುದ್ಧೀಕರಣ ಮಾಡಿ ಸರಬರಾಜು ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಆಗ ನೀರು ಸರಬರಾಜು ವ್ಯತ್ಯಯ ಆಗುವ ಸಾಧ್ಯತೆ ಇದೆ. ಜನರಿಗೆ ಸಮಸ್ಯೆ ಆಗಬಾರದು ಎಂದು ಶುದ್ಧೀಕರಣ ಘಟಕದ ಸಾಮರ್ಥ್ಯಕ್ಕೆ ತಕ್ಕಂತೆ ನೀರು ಶುದ್ಧೀಕರಿಸಿ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

‘ಶುದ್ಧೀಕರಣ ಮಾಡದೆ ಕೆಸರು ಮಿಶ್ರಿತ ನೀರು ಸರಬರಾಜು ಮಾಡಿರುವುದು ಪಂಚಾಯತಿ ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತಿದೆ’ ಎಂದು ವಿಪಕ್ಷ ಸದಸ್ಯ ಶರೀಫ್ ಕಂಠಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT