ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಂಪ್ಕೊ ಸುವರ್ಣ ಮಹೋತ್ಸವಕ್ಕೆ ಅಮಿತ್ ಶಾ ಚಾಲನೆ

Last Updated 11 ಫೆಬ್ರುವರಿ 2023, 11:40 IST
ಅಕ್ಷರ ಗಾತ್ರ

ಪುತ್ತೂರು (ದಕ್ಷಿಣ ಕನ್ನಡ): ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತದ (ಕ್ಯಾಂಪ್ಕೊ) ಸುವರ್ಣ ಮಹೋತ್ಸವಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಚಾಲನೆ ನೀಡಿದರು.

ಇಲ್ಲಿನ ತೆಂಗಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಸಮಾರಂಭವನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರಗ ಜ್ಞಾನೇಂದ್ರ, ವಿ. ಸುನಿಲ್ ಕುಮಾರ್, ಎಸ್. ಅಂಗಾರ, ಎಸ್‌ಟಿ ಸೋಮಶೇಖರ್, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೂಡ್ಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT