ಉಜಿರೆ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ರಾಜ್ಯದೆಲ್ಲೆಡೆ ನಡೆಸಲಾದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ ಮೇ 20ರಂದು ಬೆಳಿಗ್ಗೆ 10 ಗಂಟೆಗೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಶಿರಹಟ್ಟಿ ಮಠದ ನಿರಂಜನ ಸ್ವಾಮೀಜಿ ಆಶೀರ್ವಚನ ನೀಡುವರು. ಬೆಂಗಳೂರಿನ ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಹೇಮಾವತಿ ವೀ. ಹೆಗ್ಗಡೆ ಪಾಲ್ಗೊಳ್ಳುವರು. ಸಮಾವೇಶದಲ್ಲಿ 2900 ಮಂದಿ ವ್ಯಸನ ಮುಕ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.