ಗುರುವಾರ , ಅಕ್ಟೋಬರ್ 29, 2020
26 °C

ಡ್ರಗ್ಸ್: ಮಂಗಳೂರಿನಲ್ಲಿ ಮಣಿಪುರದ ಯುವತಿ ಬಂಧನ, ಹಲವರಿಗೆ ನೋಟಿಸ್ ನೀಡಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಡ್ರಗ್ಸ್‌ ಸಾಗಣೆ ಹಾಗೂ ಸೇವನೆ ಆರೋಪದಲ್ಲಿ ಶನಿವಾರ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್, ನೃತ್ಯ ಸಂಯೋಜಕ ಕಿಶೋರ್ ಶೆಟ್ಟಿಯನ್ನು ಮಂಗಳೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇದೀಗ ಆತನೊಂದಿಗೆ ಡ್ರಗ್ಸ್ ಪಾರ್ಟಿ ಮಾಡಿದ್ದ ಯುವತಿಯನ್ನು ಬಂಧಿಸಿದ್ದಾರೆ.

ಮಣಿಪುರದ ಆಸ್ಕಾ ಬಂಧಿತ ಯುವತಿ. ಆಸ್ಕಾ ಮಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಡ್ರಗ್ಸ್ ಟೆಸ್ಟ್‌ಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ.

ಇಬ್ಬರು ಯುವತಿಯರನ್ನು ಬಂಧಿಸಲಾಗಿತ್ತು. ಆದರೆ ಒಬ್ಬ ಯುವತಿಯ ರಕ್ತದ ಮಾದರಿ ತಪಾಸಣೆ ವರದಿ ನೆಗೆಟಿವ್ ಬಂದಿದೆ. ಆಸ್ಕಾಳ ಪರೀಕ್ಷೆಯಲ್ಲಿ ಡ್ರಗ್ಸ್ ಸೇವಿಸಿರುವುದು ಖಚಿತವಾಗಿದೆ.

ಇದನ್ನೂ ಓದಿ: 

ಬಂಧನಕ್ಕೊಳಗಾದ ಯುವತಿ ಆಸ್ಕಾಗೆ, ಕಿಶೋರ್ ಜೊತೆಗೆ ನಂಟಿರುವುದು ಪತ್ತೆಯಾಗಿದೆ. ಆಕೆಯ ಸ್ನೇಹಿತೆಯರು ಕೂಡ ಡ್ರಗ್ ಪಾರ್ಟಿಗೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅವರಿಗೂ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.

ಕಿಶೋರ್‌ನನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಸ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು