ಬುಧವಾರ, ಜೂನ್ 23, 2021
22 °C

ಪಾನಮತ್ತ‌ ಎಂಜಿನಿಯರ್ ಚಲಾಯಿಸುತ್ತಿದ್ದ ಕಾರು ಡಿಕ್ಕಿ; ಪಾದಚಾರಿ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮದ್ಯ ಸೇವಿಸಿದ್ದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಲಾಯಿಸಿದ ಕಾರು ಡಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ನಗರದ ಕದ್ರಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಬಿಎಸ್‌ಎನ್‌ಎಲ್‌ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ.

ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪ ವಿಭಾಗದ ಎಇಇ ಶಣ್ಮುಗಂ ಅವರನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ 9.53ಕ್ಕೆ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಆನಂದ ಅವರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಕ್ಕಿಯ ರಭಸಕ್ಕೆ ಪಾದಚಾರಿ ಆನಂದ ಸುಮಾರು ದೂರದವರೆಗೆ ಎಗರಿ ಬಿದ್ದು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು