ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ದರೇಮನೆ ನಿಟ್ಟೂರು ಗ್ರಾಮದ ಡಿ.ಎಸ್.ಶ್ರೀಧರ್ ಅವರನ್ನು ಆಯ್ಕೆ ಮಾಡಲಾಗಿದೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಪ್ರಶಸ್ತಿಯು ₹1 ಲಕ್ಷ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ, ಹಾರ, ಶಾಲು, ಪೇಟ ಹಾಗೂ ತಾಂಬೂಲಗಳನ್ನು ನೀಡಿ ಗೌರವಿಸಲಾಗುವುದು ಎಂದರು.

'ಗೌರವ ಪ್ರಶಸ್ತಿ'ಗೆ ಉಡುಪಿ ಕುಂಜಿಬೆಟ್ಟು ಬಿ.ಸಂಜೀವ ಸುವರ್ಣ, ಮಂಗಳೂರು ತಲಕಳದ ಕೆ.ತಿಮ್ಮಪ್ಪ ಗುಜರನ್, ಶಿರಸಿಯ ಡಾ.ವಿಜಯ ನಳಿನಿ ರಮೇಶ್, ಬೆಂಗಳೂರಿನ ಡಾ. ಚಕ್ಕರೆ ಶಿವಶಂಕರ್, ಹರಪನಹಳ್ಳಿಯ ಬಿ. ಪರಶುರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹50 ಸಾವಿರ ನಗದು ಪುರಸ್ಕಾರ ಹೊಂದಿದೆ.

'ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿ'ಗೆ ಕುಂದಾಪುರದ ಗೋಪಾಲ ಆಚಾರ್ಯ ತೀರ್ಥಹಳ್ಳಿ ಹಾಗೂ ಬೇಲ್ತೂರು ರಮೇಶ್, ಉಡುಪಿಯ ಆವರ್ಸೆ ಶ್ರೀನಿವಾಸ ಮಡಿವಾಳ, ಮಂಗಳೂರಿನ ಹರಿನಾರಾಯಣ ಬೈಪಡಿತ್ತಾಯ ಹಾಗೂ ಸಂಜಯ್ ಕುಮಾರ್ ಶೆಟ್ಟಿ, ಶಿರಸಿಯ ಎಂ.ಆರ್. ಹೆಗಡೆ ಕಾನಗೋಡ, ಕುಂದಾಪುರದ ಸುಬ್ರಹ್ಮಣ್ಯ ಧಾರೇಶ್ವರ, ಬಂಟ್ವಾಳದ ವಿಟ್ಲ ಶಂಭು ಶರ್ಮ, ಶಿರಾ ತಾಲ್ಲೂಕು ಬರಗೂರಿನ ಹನುಮಂತರಾಯಪ್ಪ ಮತ್ತು ಕೋಲಾರ ತಾಲ್ಲೂಕಿನ ವಕ್ಕಲೇರಿಯ ಎ.ಎಂ. ಮುಳವಾಗಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಪುರಸ್ಕಾರ ಹೊಂದಿದೆ.

ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್.ಶಿವರುದ್ರಪ್ಪ, ಸದಸ್ಯರಾದ ರಾಧಾಕೃಷ್ಣ ಕಲ್ಚಾರ್, ಕದ್ರಿ ನವನೀತ ಶೆಟ್ಟಿ ಮತ್ತು ದಾಮೋದರ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.