ಶ್ರೀಮಂತರಿದ್ದರೂ ಬಡವರು

6
ಶಾಂತಿವನ ಟ್ರಸ್ಟ್: ಯೋಗ, ನೈತಿಕ ಶಿಕ್ಷಣ ಪುರಸ್ಕಾರ

ಶ್ರೀಮಂತರಿದ್ದರೂ ಬಡವರು

Published:
Updated:
Prajavani

ಉಜಿರೆ: ಹಿಂದೆ ನಮಗೆ ಆರ್ಥಿಕ ಬಡತನವಿದ್ದರೂ, ಸಾಂಸ್ಕೃತಿಕವಾಗಿ ಶ್ರೀಮಂತರಾಗಿದ್ದೆವು. ಆದರೆ ಈಗ ಆರ್ಥಿಕವಾಗಿ ಶ್ರೀಮಂತರಾಗಿದ್ದೇವೆ. ಸಾಂಸ್ಕೃತಿಕವಾಗಿ ಬಡವರಾಗಿದ್ದೇವೆ ಎಂದು ಹಾಸ್ಯ ಸಾಹಿತಿ ಎಚ್. ದುಂಡಿರಾಜ್ ಹೇಳಿದರು.

ಧರ್ಮಸ್ಥಳದಲ್ಲಿ ಶುಕ್ರವಾರ  ನಡೆದ ಶಾಂತಿವನ ಟ್ರಸ್ಟ್‌ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಆಶ್ರಯದಲ್ಲಿ ಜ್ಞಾನ ಗಂಗೆ ಮತ್ತು ಜ್ಞಾನ ತುಂಗೆ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆಧರಿಸಿದ ಸ್ಪರ್ಧೆಗಳ ವಿಜೇತರಿಗೆ ಪುರಸ್ಕಾರ ನೀಡುವ ಸಮಾರಂಭದಲ್ಲಿ ಅವರು ಮಾತನಾಡಿದರು.

‘ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ವಿತರಣೆ ಮೂಲಕ ಹೆಗ್ಗಡೆ ಅವರು ಶಿಕ್ಷಣದ ಮೂಲಕ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸುತ್ತಿದ್ದಾರೆ. ಸರ್ಕಾರ ಮಾಡಬೇಕಾದ ಕಾರ್ಯವನ್ನು ಅವರು ಮಾಡುತ್ತಿರವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಸಸಿ ಹಂಚಿದರೆ ವನಮಹೋತ್ಸವ. ಖುಷಿ ಹಂಚಿದರೆ ಜೀವನ ಮಹೋತ್ಸ. ಆದುದರಿಂದ ಕಲೆ, ಸಂಸ್ಕೃತಿ ಮೂಲಕ ಖುಷಿ ಹಂಚೋಣ. ಶಾಂತಿ, ನೆಮ್ಮದಿಯ ಜೀವನ ನಡೆಸೋಣ’ ಎಂದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ‘ಶಿಕ್ಷಣದ ಮೂಲಕ ಜ್ಞಾನ ವೃದ್ಧಿಸಿಕೊಂಡು ಆದರ್ಶ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯವೇ ದೇಶದ ಭಾಗ್ಯವಾಗಿದೆ. ಕೆಟ್ಟ ಗುಣಗಳನ್ನು ತ್ಯಜಿಸಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಬದುಕಿನ ಪಾಠವನ್ನೂ ಕಲಿಯಬೇಕು’ ಎಂದು ಹೆಗ್ಗಡೆ ಕಿವಿಮಾತು ಹೇಳಿದರು.

ಶ್ರದ್ಧಾ ಅಮಿತ್, ಭಾರತಿ ದುಂಡಿರಾಜ್, ಮತ್ತು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಧುಕರ್ ಮತ್ತು ಚಂದ್ರಶೇಖರ ಕೆದಿಲಾಯ ಉಪಸ್ಥಿತರಿದ್ದರು.

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಶಶಿಕಾಂತ ಜೈನ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ಸಂಘಟಕ ಅಶೋಕ ಸಿ. ಪೂಜಾರಿ ಧನ್ಯವಾದ ಸಲ್ಲಿಸಿದರು. ಬಂಟ್ವಾಳದ ಸದಾಶಿವ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !