ಬೆಂಗಳೂರು: ಎಬೋಲಾ ಪ್ರಕರಣಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಚಿಕಿತ್ಸಾ ಕೇಂದ್ರಗಳನ್ನು ಗುರುತಿಸಿರುವ ಆರೋಗ್ಯ ಇಲಾಖೆ, ಶಂಕಿತ ಪ್ರಕರಣಗಳ ಪತ್ತೆಗೆ ವ್ಯವಸ್ಥೆ ಸೇರಿ ವಿವಿಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯನ್ನು ನಿಗಾ ಕೇಂದ್ರ (ಕ್ವಾರಂಟೈನ್) ಹಾಗೂ ಎಪಿಡೆಮಿಕ್ ಡಿಸೀಸ್ ಆಸ್ಪತ್ರೆಯನ್ನು ಚಿಕಿತ್ಸಾ ಕೇಂದ್ರವನ್ನಾಗಿ ಗುರುತಿಸಲಾಗಿದೆ. ಮಂಗಳೂರಿನಲ್ಲಿ ಶ್ರೀನಿವಾಸ್ ಪೋರ್ಟ್ ಆಸ್ಪತ್ರೆಯನ್ನು ನಿಗಾ ಕೇಂದ್ರವನ್ನಾಗಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ಚಿಕಿತ್ಸಾ ಕೇಂದ್ರವನ್ನಾಗಿ ಗೊತ್ತುಪಡಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಶಂಕಿತ ರೋಗಿಗಳನ್ನು ಆಸ್ಪತ್ರೆಗೆ ರವಾನಿಸಲು ನಿಗದಿತ ಆಂಬುಲೆನ್ಸ್ ಸೇವೆಯನ್ನೂ ಸಜ್ಜುಗೊಳಿಸಲಾಗಿದೆ. ಶಂಕಿತ ಎಬೋಲಾ ಪ್ರಕರಣಗಳ ಮಾದರಿಗಳನ್ನು ಸಂಗ್ರಹಿಸಿ, ರಾಷ್ಟ್ರೀಯ ವೈರಾಣು ಸಂಸ್ಥೆಯ (ಎನ್ಐವಿ) ಬೆಂಗಳೂರು ಘಟಕದ ಮೂಲಕ ಪುಣೆಯ ಎನ್ಐವಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.

ಎಬೋಲಾ ಪೀಡಿತ ದೇಶಗಳಿಗೆ ಇತ್ತೀಚೆಗೆ ಪ್ರಯಾಣ ಮಾಡಿದವರು, ಭಾರತಕ್ಕೆ ಮರಳಿದ ನಂತರ 21 ದಿನಗಳ ಕಾಲ ಆರೋಗ್ಯ ಮೇಲ್ವಿಚಾರಣೆ ಹಾಗೂ ಪ್ರತ್ಯೇಕ ವೀಕ್ಷಣೆಯಲ್ಲಿ ಇರಬೇಕು. ಯಾವುದೇ ರೋಗ ಲಕ್ಷಣಗಳು ಕಂಡುಬಂದರೆ ಅವರು ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ವರದಿ ಮಾಡಬೇಕು ಎಂದು ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-264305744

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.