ಮಂಗಳೂರು: ‘ನವ ಉದಾರೀಕರಣದ ನೀತಿಗಳು ಅನುಷ್ಠಾನಗೊಂಡು ಮೂರು ದಶಕಗಳಳಲ್ಲಿ ಭಾರತ ಅರ್ಥಿಕ ಅಸಮಾನತೆಯ ಉತ್ತುಂಗಕ್ಕೆ ತಲುಪಿದೆ. ಒಂದೆಡೆ ದುಡಿಯುವ ಜನರು ಹಸಿವಿನಿಂದ ಬಳುತ್ತಿದ್ದರೆ, ಹೊಸ ಕಾಯ್ದೆಗಳು ಅವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿವೆ. ಇವೆಲ್ಲದರ ಪರಿಣಾಮವಾಗಿ ದೇಶದಲ್ಲಿ 284 ಕೋಟ್ಯಧಿಪತಿಗಳು ಸೃಷ್ಟಿಯಾಗಿದ್ದಾರೆ’ ಎಂದು ಸಿಐಟಿಯು ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪ್ರಕಾಶ್ ವಿಶ್ಲೇಷಿಸಿದರು.

ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸಿಐಟಿಯು 18ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನವ ಉದಾರೀಕರಣ ನೀತಿ ಜಾರಿಯಾಗುವುದಕ್ಕೂ ಮುನ್ನ ದೇಶದಲ್ಲಿ ಕೋಟ್ಯಧಿಪತಿಗಳು ಇಷ್ಟೊಂದು ಪ್ರಮಾಣದಲ್ಲಿ ಇರಲಿಲ್ಲ. ಈ ರೀತಿಯ ಬಡತನವೂ ಇರಲಿಲ್ಲ. ಆದರೆ ಇಂದು, 284 ಕೋಟ್ಯಧಿಪತಿಗಳಲ್ಲಿ ದೇಶದ ಎರಡು ವರ್ಷಗಳ ಬಜೆಟ್ ಮೌಲ್ಯದಷ್ಟು ಸಂಪತ್ತು ಶೇಖರಣೆಗೊಂಡಿದೆ. ಹಸಿವು, ಬಡತನ, ನಿರುದ್ಯೋಗ, ಅನಾರೋಗ್ಯ ಮಿತಿಮೀರುವುದಕ್ಕೆ ಇದೇ ಕಾರಣ’ ಎಂದರು.

‘ದೇಶದ ಆಡಳಿತವು ಈ ಕೋಟ್ಯಧಿಪತಿಗಳ ಮೂಗಿನ ನೇರಕ್ಕೆ ನಡೆಯುತ್ತಿದೆ. ನೀತಿಗಳೆಲ್ಲವೂ ಅವರ ಪರವಾಗಿ ರೂಪುಗೊಳ್ಳುತ್ತಿದೆ. ಕಾಂಗ್ರೆಸ್ ಆಳ್ವಿಕೆಯಲ್ಲಿ ಶುರುವಾದ ಈ ಪ್ರಕ್ರಿಯೆ ನರೇಂದ್ರ ಮೋದಿ ಕಾಲದಲ್ಲಿ ಉತ್ತುಂಗಕ್ಕೆ ತಲುಪಿದೆ’ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಿ ಕಾರ್ಪೊರೇಟ್ ಕಂಪೆನಿಗಳ ಹಿತ ಕಾಪಾಡುತ್ತಿವೆ. ದುಡಿಯುವ ವರ್ಗದ ಪರವಾಗಿ ಯಾವುದೇ ನೀತಿ ಜಾರಿಗೊಳ್ಳುತ್ತಿಲ್ಲ. ಇಂತಹ ಸರ್ಕಾರಗಳ ಆಕ್ರಮಣಕಾರಿ ನೀತಿಗಳನ್ನು ಕಾರ್ಮಿಕ ವರ್ಗ ಸಮರಶೀಲ ಹೋರಾಟಗಳ ಮೂಲಕವೇ ಹಿಮ್ಮೆಟ್ಟಿಸಬೇಕು’ ಎಂದರು.

ಸಮ್ಮೇಳನವನ್ನು ಉದ್ಘಾಟಿಸಿದ ಸಿಐಟಿಯು ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಜೆ.ಬಾಲಕೃಷ್ಣ, ‘ಬಲಿಷ್ಠ ಕಾರ್ಮಿಕ ಚಳವಳಿ ಕಟ್ಟುವ ಮೂಲಕ ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ಉಳಿಸಬೇಕಿದೆ’ ಎಂದರು.

ಸಿಐಟಿಯು ಜಿಲ್ಲಾ ನಾಯಕರಾದ ವಸಂತ ಅಚಾರಿ, ಸುಕುಮಾರ್ ತೊಕ್ಕೊಟ್ಟು, ಬಿ.ಎಂ.ಭಟ್, ರಮಣಿ ಮೂಡುಬಿದ್ರೆ, ಪದ್ಮಾವತಿ ಶೆಟ್ಟಿ, ವಸಂತಿ ಕುಪ್ಪೆಪದವು, ಸುಂದರ ಕುಂಪಲ, ಗಿರಿಜಾ ಭಾಗವಹಿಸಿದ್ದರು. ಅಗಲಿದ ನಯಕರಿಗೆ ಯೋಗೀಶ್ ಜಪ್ಪಿನಮೊಗರು ಶ್ರದ್ಧಾಂಜಲಿ ಸಲ್ಲಿಸಿದರು. ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ರವಿಚಂದ್ರ ಕೊಂಚಾಡಿ ಧನ್ಯವಾದ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.