ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ವಿವೇಕಾನಂದ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಇಕನಾಮಿಕ್ಸ್ ಫೆಸ್ಟ್ 'ಎಕಾಕ್ಸೆನಿತ್-2020' ಸಮಾರೋಪ
Last Updated 24 ಫೆಬ್ರುವರಿ 2020, 11:05 IST
ಅಕ್ಷರ ಗಾತ್ರ

ಪುತ್ತೂರು: ನಗರದ ಸಂತ ಫಿಲೋಮಿನಾ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ವತಿಯಿಂದ ನಡೆದ ಆಹ್ವಾನಿತ ಅಂತರಕಾಲೇಜು ಎಕನಾಮಿಕ್ಸ್ ಫೆಸ್ಟ್ 'ಎಕಾಕ್ಸೆನಿತ್-2020' ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಲ್ಲಡ್ಕದ ಅನುಗ್ರಹ ಪ್ರಥಮ ದರ್ಜೆ ಮಹಿಳಾ ಕಾಲೇಜು ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ ಲಭಿಸಿದೆ.

ಮಂಗಳೂರು ವಿಶ್ವಿದ್ಯಾಲಯದ ಅಧೀನಕ್ಕೊಳಪಡುವ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕುಗಳ ಆಹ್ವಾನಿತ 19 ಪದವಿ ಕಾಲೇಜುಗಳ ಅರ್ಥಶಾಸ್ತ್ರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

'ಪರಿಸರ ಉಳಿಸಿ' ಕುರಿತು ಟೀಶರ್ಟ್‌ ಪೈಂಟಿಂಗ್‌ನಲ್ಲಿ ಪುತ್ತೂರಿನ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ, ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜು ದ್ವಿತೀಯ, ಕೇಂದ್ರ ಬಜೆಟ್‌ ಕುರಿತ `ಯೂನಿಯನ್ ಬಜೆಟ್ ಅಂಡ್ ಇಂಡಿಯಾ ಇನ್ 2020' ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ , ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ, ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತ ರಸಪ್ರಶ್ನೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ , ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜು ದ್ವಿತೀಯ ಸ್ಥಾನ ಪಡೆದಿವೆ.

ಮೋಕ್ ಪ್ರೆಸ್ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿ ಪಥಮ ದರ್ಜೆ ಕಾಲೇಜು ಪ್ರಥಮ , ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದ್ವಿತೀಯ, `ಗ್ರೀನ್ ಸಿಟಿ-ಕ್ಲೀನ್ ಸಿಟಿ' ಕುರಿತ ಮಾದರಿ ತಯಾರಿ ಸ್ಪರ್ಜೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ, ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದ್ವಿತೀಯ, ‘ಇಕೋ-ಫ್ಯಾಶನ್ ಶೋ’ ಸ್ಪರ್ಧೆಯಲ್ಲಿ ಕಲ್ಲಡ್ಕದ ಅನುಗ್ರಹ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಥಮ ಮತ್ತು ವಿವೇಕಾನಂದ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT