ಜಿಲ್ಲೆಯಲ್ಲಿ 29 ರಂದು ಈದ್ ಮಿಲಾದ್ ಆಚರಣೆ
ತೆರೆದ ಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ ಇಲ್ಲ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ 29 ರಂದು ಈದ್ ಮಿಲಾದ್ ಆಚರಿಸಲಾಗುತ್ತಿದ್ದು, ಹಬ್ಬದ ಆಚರಣೆಗೆ ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಿಸಿದ್ದಾರೆ.
ತೆರೆದ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಆಯೋಜಿಸುವಂತಿಲ್ಲ. ಸ್ಯಾನಿಟೈಸರ್ ಹಾಗೂ ಸೋಪಿನಿಂದ ಕೈತೊಳೆಯಲು ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಪಾಡಬೇಕು , ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ಹಗಲು ಮತ್ತು ರಾತ್ರಿಯ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ–ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.