ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡ್ವರ್ಡ್ ಡಿಸೋಜಗೆ ರಾಜ್ಯ ಮಟ್ಟದಉತ್ತಮ ಶಿಕ್ಷಕ ಪ್ರಶಸ್ತಿ

Last Updated 4 ಸೆಪ್ಟೆಂಬರ್ 2021, 3:58 IST
ಅಕ್ಷರ ಗಾತ್ರ

ಬೆಳ್ತಂಗಡಿ: ತಾಲ್ಲೂಕಿನ ಕಟ್ಟದಬೈಲು ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಡ್ವರ್ಡ್ ಡಿಸೋಜ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. 1992ರಲ್ಲಿ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಿಂದ ವೃತ್ತಿ ಜೀವನ ಆರಂಭಿಸಿದ ಅವರು, 2003ರಿಂದ ಕಟ್ಟದಬೈಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ಶಾಲಾ ಕಟ್ಟಡ, ವಿದ್ಯುದೀಕರಣ, ಹೊರಾಂಗಣ– ಒಳಾಂಗಣ ವೇದಿಕೆ ನಿರ್ಮಾಣ ಮೊದಲಾದ ಅಭಿವೃದ್ಧಿ ಕಾರ್ಯಗಳಲ್ಲಿ ಮುತುವರ್ಜಿ ವಹಿಸಿ, ಕಟ್ಟದಬೈಲು ಶಾಲೆ ಸರ್ವತೋಮುಖ ಅಭಿವೃದ್ಧಿಯ ಜೊತೆಗೆ ‘ಸ್ವರ್ಣನಿಧಿ’ ಹೆಸರಿನಲ್ಲಿ ಪ್ರತಿ ದಿನ ₹ 11 ಸೇರಿಸಿ ಮಕ್ಕಳಿಂದ ಪ್ರತಿ ದಿನ ಒಂದು ರೂಪಾಯಿ ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್, ಶಿಷ್ಯವೇತನ, ಪ್ರೋತ್ಸಾಹಧನ ನೀಡಿದ್ದಾರೆ. ವಜ್ರನಿಧಿ ಹೆಸರಿನಲ್ಲಿ ದಾನಿಗಳು, ಶಿಕ್ಷಕರು ಹಾಗೂ ಪೋಷಕರ ನೆರವು ಪಡೆದು ಗೌರವ ಶಿಕ್ಷಕಿಯರಿಗೆ ಸಂಭಾವನೆ ನೀಡುವ ಕೆಲಸ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT