ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರದರ್ಶಕ ಚುನಾವಣೆಗೆ ಸಜ್ಜಾಗಿ: ಡಿಸಿ

Published 11 ಡಿಸೆಂಬರ್ 2023, 17:17 IST
Last Updated 11 ಡಿಸೆಂಬರ್ 2023, 17:17 IST
ಅಕ್ಷರ ಗಾತ್ರ

ಮಂಗಳೂರು: ಆತಂಕ, ಭಯರಹಿತ, ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಅಧಿಕಾರಿಗಳು ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಲೋಕಸಭಾ ಚುನಾವಣಾ ಪೂರ್ವಸಿದ್ಧತೆಯ ನಿರ್ಣಾಯಕ ಮತಗಟ್ಟೆಗಳ ಗುರುತಿಸುವಿಕೆ ಕುರಿತು ಸೋಮವಾರ ಇಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. 

ಚುನಾವಣಾ ಆಯೋಗ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಓದಿಕೊಂಡು ಅದೇ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಚುನಾವಣಾ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆಯೋಗ ಸ್ಪಷ್ಟವಾಗಿ ತಿಳಿಸಿದೆ. ಅದರಂತೆ ಪ್ರತಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.

ಗಡಿ ಪ್ರದೇಶಗಳಾದ ಸುಳ್ಯ ಹಾಗೂ ಈಶ್ವರಮಂಗಲ, ತಲಪಾಡಿ, ಬಂಟ್ವಾಳ, ಬೆಳ್ತಂಗಡಿಯಲ್ಲಿ ಚೆಕ್‌ಪೋಸ್ಟ್‌ ಗಳನ್ನು ತೆರೆಯಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ ಸಂತೋಷ್‌ಕುಮಾರ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT