ಬುಧವಾರ, ಜೂಲೈ 8, 2020
28 °C

ದಕ್ಷಿಣ ಕನ್ನಡ | ಜಿಲ್ಲೆಯಲ್ಲಿ 11 ಜನರಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 11 ಮಂದಿಯಲ್ಲಿ ಕೋವಿಡ್ -19 ಸೋಂಕು ತಗುಲಿರುವುದು ದೃಢವಾಗಿದೆ. 

ದೃಢವಾದ 11 ಮಂದಿಯಲ್ಲಿ 10 ಮಂದಿ ಮಹಾರಾಷ್ಟ್ರ ಹಾಗೂ ಒಬ್ಬರು ಗುಜರಾತ್ ರಾಜ್ಯದಿಂದ ಬಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.

ಈ ಪೈಕಿ 3, 11, ವರ್ಷದ ಮಕ್ಕಳಿಗೂ ಸೋಂಕು ತಗುಲಿದೆ. ಇದಲ್ಲದೆ 36, 59, 17, 45, 37 ಮಹಿಳೆ ಹಾಗೂ 35, 46, 39 ವರ್ಷದ ಪುರುಷರಲ್ಲಿ ಸೋಂಕು ದೃಢವಾಗಿದ್ದು ಇವರೆಲ್ಲರೂ ಪುತ್ತೂರು, ಬೆಳ್ತಂಗಡಿ ಹಾಗೂ ಉಳ್ಳಾಲದ ಕ್ವಾರೆಂಟೈನ್‌ಗೆ ಒಳಪಡಿಸಲಾಗಿತ್ತು. ಇವರೆಲ್ಲರನ್ನೂ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು