ಶುಕ್ರವಾರ, ಜನವರಿ 22, 2021
19 °C
ರಥಬೀದಿ ರಸ್ತೆ ಕಾಮಗಾರಿ ಪೂರ್ಣ: ಶಾಸಕ ಕಾಮತ್

ಮಂಗಳವಾರದಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ₹17 ಕೋಟಿ ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಮಂಗಳವಾರದಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. 

ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸಬೇಕಾಗಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.

ಈ ಪರಿಸರದ ಜನರು, ಸಾರ್ವಜನಿಕರು ಕಾಮಗಾರಿ ವೇಳೆ ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ ಎಂದರು.

ಬಾಕಿಯುಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗನೇ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. 

ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಳಿಧರ್ ನಾಯಕ್, ರಮೇಶ್ ಹೆಗ್ಡೆ, ಹರಿಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿತಿಯ ಅದ್ಯಕ್ಷರಾದ ಹನುಮಂತ್ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ್ ಪ್ರಭಾ, ಮೆಸ್ಕಾಂ ಅಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು