ಮಂಗಳೂರು: ಮಹಾರಾಷ್ಟ್ರ ಸರ್ಕಾರದ ಅಂತ್ಯವು ಆರಂಭಗೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.
ಅದಾನಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಬುಧವಾರ ಅರ್ನಾಬ್ ಗೋಸ್ವಾಮಿ ಬಂಧನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಮಂಗಳೂರಿನಲ್ಲಿ ಗುರುವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬುಧವಾರ ನಗರಕ್ಕೆ ಬಂದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಈಗ ಅಭಿವ್ಯಕ್ತಿ ಸ್ವಾತಂತ್ರ್ಯ ದ ಬಗ್ಗೆ ಕಾಂಗ್ರೆಸ್ ಪ್ರಮುಖರು, ಅಂದು ಪ್ರಶಸ್ತಿಗಳನ್ನು ಹಿಂದಿರುಗಿಸಿದವರೆಲ್ಲ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ. ಸುರೇಶ್ ಅಂಗಡಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಪಕ್ಷ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಿದೆ. ಆದರೆ, ಈ ಕುರಿತು ಪಕ್ಷದಲ್ಲಿ ಚರ್ಚೆಯಾಗಿಲ್ಲ ಎಂದು ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.
ಮದುವೆಗಾಗಿ ಮತಾಂತರ (ಲವ್ ಜಿಹಾದ್) ಕುರಿತ ಕಾಯ್ದೆ ಜಾರಿಗೆ ತರುವುದು ಉತ್ತಮ ಚಿಂತನೆ. ನನ್ನ ಬೆಂಬಲ ಇದೆ ಎಂದರು.