ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಚಿಮುಲ್‌ ಒಕ್ಕೂಟ ನೇಮಕಾತಿ ಹಗರಣ: ಮಂಗಳೂರು ವಿವಿ ಮೇಲೆ ಇ.ಡಿ ದಾಳಿ

Published 20 ಜನವರಿ 2024, 5:23 IST
Last Updated 20 ಜನವರಿ 2024, 5:23 IST
ಅಕ್ಷರ ಗಾತ್ರ

ಮಂಗಳೂರು: ಕೋಲಾರ– ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮುಲ್) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಶೋಧ ನಡೆಸಿದರು.

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಪರೀಕ್ಷಾಂಗ ಹಾಗೂ ಆಡಳಿತ ಕುಲಸಚಿವರ ಕಚೇರಿ, ಬ್ಯಾಂಕ್‌ಗಳಲ್ಲಿ ಪರಿಶೀಲನೆ ನಡೆಸಿ, ಕೊಚಿಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಾಳಿ ನಡೆಸಿರುವುದನ್ನು ಇ.ಡಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿಯಾಗಿತ್ತು. ಕೊಚಿಮುಲ್ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಯನ್ನು ವಿಶ್ವವಿದ್ಯಾಲಯವು ನಡೆಸಿ, ಮೌಲ್ಯಮಾಪನ ನಡೆಸಿತ್ತು. ಇದರಲ್ಲಿ ಅವ್ಯವಹಾರ ನಡೆದಿರುವ ಶಂಕೆ ಇದೆ. ಈ ಪ್ರಕರಣದಲ್ಲಿ ಕೆಲ ಸಿಬ್ಬಂದಿಯೂ ಭಾಗಿಯಾಗಿರುವ ಅನುಮಾನ ಇದ್ದು, ಅವರು ತಲೆಮರೆಸಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ದೃಢಪಡಿಸಿವೆ.

ಈ ಸಂಬಂಧ ಮಾಹಿತಿ ಪಡೆಯಲು ಕುಲಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರು ಲಭ್ಯರಾಗಲಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಮಾತನಾಡಿ, ‘ಮಂಗಳೂರು ವಿಶ್ವವಿದ್ಯಾಲಯದ ಮೇಲೆ ನಡೆದಿರುವ ಇ.ಡಿ ದಾಳಿ ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT