ಮಂಗಳೂರು: ಬೆಳಗಾವಿಯ ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಸಮ್ಮೇದ ಎಂಬ ವಿದ್ಯಾರ್ಥಿ ನಗರದ ಹೊರವಲಯದ ಸೋಮೇಶ್ವರ ಬಳಿ ಶುಕ್ರವಾರ ಬೆಳಿಗ್ಗೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ತನ್ನ ಸಾವಿಗೆ ಕಾರಣ ಎಂದು ಪತ್ರದಲ್ಲಿ ಆರೋಪಿಸಿದ್ದಾನೆ.

ಭಾವಚಿತ್ರ ಒಂದನ್ನು ಇರಿಸಿಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟಿದ್ದೆ ಎಂದು ವಿದ್ಯಾರ್ಥಿನಿಯೊಬ್ಬರು ತನ್ನ ಮೇಲೆ ಬ್ಲಾಕ್ ಮೇಲ್ ಆರೋಪ ಮಾಡಿದ್ದರು. ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಮೃತ ಯುವಕ ಡೆತ್‌ನೋಟ್‌ನಲ್ಲಿ ತಾಯಿ ಮತ್ತು ಅಜ್ಜಿಯಲ್ಲಿ ಕ್ಷಮೆ ಕೇಳಿದ್ದಾನೆ. ಅವರಿಬ್ಬರನ್ನೂ ಚೆನ್ನಾಗಿ ನೋಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.