ಮೂಡುಬಿದಿರೆ: ಪುತ್ತಿಗೆ ಗ್ರಾಮದ ಹಂಡೇಲುಸುತ್ತು ಬಳಿ ಶನಿವಾರ ಸಂಜೆ ಸಂಭವಿಸಿದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಮೈಸೂರು ಮೂಲದ ಸಮೃದ್ಧ್ ಮೃತರು. ಸಮೃದ್ಧ ಅವರು ತಮ್ಮ ಸಹಪಾಠಿ ಬೆಳ್ತಂಗಡಿಯ ನಿಶಾಂತ್ ಅವರೊಂದಿಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿದ್ದ ಕ್ರೀಡಾಕೂಟದಿಂದ ಮರಳಿ ಮಿಜಾರ್ನಲ್ಲಿರುವ ತಮ್ಮ ಹಾಸ್ಟೆಲಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಮಂಗಳೂರು ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ವಿದ್ಯಾಗಿರಿ ಸಮೀಪದ ಹಂಡೇಲುಸುತ್ತಿನಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಮೃದ್ಧ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಿಶಾಂತ್ ಅವರ ಭುಜಕ್ಕೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260316-29-1940946675

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.