ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶಿಪಟ್ಣ ಶಾಲೆಯಲ್ಲಿ ಇಂಗ್ಲಿಷ್‌ ಮಾಧ್ಯಮಕ್ಕೆ ಅನುಮತಿ: ಶಾಸಕ ಪೂಂಜ

ಕಾಶಿಪಟ್ಣ ಶಾಲಾಭಿವೃದ್ಧಿ ಕಾರ್ಯಗಳ ಬಗ್ಗೆ ಸಮಾಲೋಚನಾ ಸಭೆ
Last Updated 22 ನವೆಂಬರ್ 2022, 6:39 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ ಕಾಶಿಪಟ್ಣ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಸರ್ಕಾರದಿಂದ ಅನುಮತಿ ದೊರಕಿಸಿಕೊಡಲಾಗುವುದು' ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ಕಾಶಿಪಟ್ಣ ಸರ್ಕಾರಿ ಶಾಲಾ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಲೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಕಾಶಿಪಟ್ಣ ಶಾಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಕೆ. ಸಾಲ್ಯಾನ್ ಕಾಶಿಪಟ್ಣ ಮಾತನಾಡಿ, ಕಾಶಿಪಟ್ಣ ಶಾಲೆಗೆ ಗ್ರಾಮೀಣ ಬಡ ವಿದ್ಯಾರ್ಥಿಗಳು ಹೆಚ್ಚು ಬರುತ್ತಿದ್ದು, ಮೂಲಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದರು.

ಶಾಲೆಯ ಅಭಿವೃದ್ಧಿಗಾಗಿ ‘ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ’ ಎಂಬ ರಚಿಸಿ, ಸಮಿತಿಗೆ 12 ಸದಸ್ಯರ ಆಯ್ಕೆ ಮಾಡಲಾಯಿತು. ಸಮಿತಿಗೆ ಅಶೋಕ್ ಕೋಟ್ಯಾನ್ ಪಡ್ಯೋಡಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು. ಶುಭಕರ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಕಾಶಿಪಟ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ, ಪ್ರಮುಖರಾದ ಅಶೋಕ್ ಕುಮಾರ್ ಪೊರ್ತ್ರೋಡಿ, ರವೀಂದ್ರ ಪಿ ಕೇಳ, ಶುಭವಿ ಕೋಟ್ಯಾನ್, ರತ್ನಾಕರ ಬುಣ್ಣನ್, ಶಶಿಕಲಾ, ಅಖ್ತರ್ ಅಹಮ್ಮದ್ ಹಾಸ್ಕೊ, ಶಾಲಾ ಮುಖ್ಯಶಿಕ್ಷಕ ಕೃಷ್ಣಪ್ಪ ನಾಯ್ಕ ಇದ್ದರು.

ಶಿಕ್ಷಕಿ ವಸುಧಾ ಪಿ. ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿಯವರಾದ ಭವ್ಯಾ ಜಿ.ಎಚ್‌. ಮತ್ತು ಪದ್ಮಶ್ರೀ ಜೈನ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT