ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಕ್ -ಆಧಾರ್ ಲಿಂಕ್: ಚುರುಕುಗೊಳಿಸಲು ಸೂಚನೆ

Last Updated 17 ಆಗಸ್ಟ್ 2022, 16:31 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿಗೆ (ಎಪಿಕ್) ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲ ಇಲಾಖೆಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ದೇಶನ ನೀಡಿದರು.

ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ‘ಸರ್ಕಾರದ ಎಲ್ಲ ಇಲಾಖೆಗಳ ಮುಖ್ಯಸ್ಥರು ಎಪಿಕ್ ಕಾರ್ಡ್‍ಗೆ ಆಧಾರ್ ಅಥವಾ ಅದನ್ನು ಹೊರತುಪಡಿಸಿ ನಿಗದಿಪಡಿಸಿದ ನರೇಗಾ ಉದ್ಯೋಗ ಚೀಟಿ, ಬ್ಯಾಂಕ್ ಅಥವಾ ಅಂಚೆ ಕಚೇರಿಯ ಪಾಸ್‍ಬುಕ್, ಆರೋಗ್ಯ ವಿಮೆ, ಚಾಲನಾ ಪರವಾನಗಿ, ಪಾನ್ ಕಾರ್ಡ್, ಎನ್‍ಪಿಆರ್‌ ಅಡಿಯಲ್ಲಿ ನೀಡಲಾದ ಸ್ಮಾರ್ಟ್ ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿ ದಾಖಲಾತಿಗಳು, ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸಿದ ನೌಕರರ ಗುರುತಿನ ಚೀಟಿ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ನೀಡಿದ ಅಧಿಕೃತ ಗುರುತಿನ ಚೀಟಿ ಸೇರಿದಂತೆ ಒಟ್ಟು 11 ದಾಖಲಾತಿಗಳಲ್ಲಿ ಯಾವುದಾದರೂ ಒಂದನ್ನು ಜೋಡಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಮಾತನಾಡಿ, ‘ಗ್ರಾಮೀಣ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಆಧಾರ್ ಜೋಡಿಸಲು ನಿರ್ದೇಶನ ನೀಡಲಾಗಿದೆ. ಆ.21ರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಎಲ್ಲ ಬಿಎಲ್‍ಒಗಳು ಮತಗಟ್ಟೆಯಲ್ಲಿ ಹಾಜರಿದ್ದು, ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರು, ಮತಗಟ್ಟೆ ಎಜೆಂಟರೊಂದಿಗೆ ಗ್ರಾಮ ವ್ಯಾಪ್ತಿಯಲ್ಲಿ ಎಪಿಕ್ ಕಾರ್ಡ್‍ಗೆ ಆಧಾರ್ ಲಿಂಕ್ ಮಾಡುವ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿಗಳಾದ ಮದನ್ ಮೋಹನ್, ಗಿರೀಶ್ ನಂದನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT