ಬುಧವಾರ, ಸೆಪ್ಟೆಂಬರ್ 29, 2021
20 °C
ಯುವತಿಯ ಫೇಸ್‌ಬುಕ್‌ ಖಾತೆ ದುರ್ಬಳಕೆ

ಪಶ್ಚಿಮ ಬಂಗಾಳ ಪೊಲೀಸರಿಂದ ಕಡಬದ ಯುವಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಡಬ: ಯುವತಿಯ ಫೇಸ್‌ಬುಕ್‌ ಖಾತೆಯನ್ನು ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಕಡಬದ ಯುವಕನನ್ನು ಪಶ್ಚಿಮ ಬಂಗಾಳದ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಗೆ ಸಂಬಂಧಿಸಿದ ಖಾತೆಯನ್ನು ಕಡಬ ತಾಲ್ಲೂಕಿನ ನೂಜಿಬಾಳ್ತಿಲದ ಬಳ್ಳೇರಿ ನಿವಾಸಿ ಸಂಜಯ್ ಕೃಷ್ಣ ಎಂಬಾತ ದುರುಪಯೋಗ ಪಡಿಸಿಕೊಂಡ ಬಗ್ಗೆ ಯುವತಿಯು ಪಶ್ಚಿಮ ಬಂಗಾಳದಲ್ಲಿ ದೂರು ದಾಖಲಿಸಿದ್ದರು.

ಪಶ್ಚಿಮ ಬಂಗಾಳ ಪೊಲೀಸರು ಕಡಬ ಪೊಲೀಸರ ಸಹಾಯದಿಂದ ಸಂಜಯ್ ಕೃಷ್ಣನನ್ನು ಬಂಧಿಸಿ, ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಲಾಗಿದ್ದು, ಪಶ್ಚಿಮ ಬಂಗಾಳಕ್ಕೆ ಕರೆದೊಯ್ಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು