ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ಸವಲತ್ತು–ಜಿಲ್ಲಾಡಳಿತ ಬದ್ಧ: ಡಿ.ಸಿ

Last Updated 3 ಡಿಸೆಂಬರ್ 2022, 13:52 IST
ಅಕ್ಷರ ಗಾತ್ರ

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಅಂಗವಿಕಲರಿಗೆ ಅಗತ್ಯ ಸವಲತ್ತುಗಳನ್ನು ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ’ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದರು.

ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ಗಾಂಧಿನಗರ ಲಯನ್ಸ್ ಕ್ಲಬ್ ಮತ್ತು ಶಿಶು ಕೇಂದ್ರಿಕೃತ ಶಾಲೆಗಳ ಅಶ್ರಯದಲ್ಲಿ ಇಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ., ಉದ್ಯಮಿ ಗಣೇಶ್ ಶೆಟ್ಟಿ, ಅಶೋಕ್ ಮೊಯಿಲಿ, ಲೋಕೇಶ್ ಹಾಗೂ ಜಿಲ್ಲಾಅಂಗವಿಕಲರ ಕಲ್ಯಾಣಾಧಿಕಾರಿ ಗೋಪಾಲ ಕೃಷ್ಣ ಇದ್ದರು.

ಅಂಗವಿಕಲರ ಅಭಿವೃದ್ಧಿಗಾಗಿ ಶ್ರಮಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಂಗವಿಕಲರನ್ನು ಗೌರವಿಸಲಾಯಿತು.ಗಾಲಿಕುರ್ಚಿ, ಶ್ರವಣ ಸಾಧನಗಳನ್ನು ವಿತರಿಸಲಾಯಿತು.

ಜಾಥಾ: ಇದಕ್ಕೂ ಮುನ್ನ ನಗರದ ವಿಶ್ವವಿದ್ಯಾಲಯ ಕಾಲೇಜು ಆವರಣದಲ್ಲಿ ವಿಶೇಷ ಮಕ್ಕಳ ಜಾಥಾಕ್ಕೆಜಿಲ್ಲಾಧಿಕಾರಿ ಚಾಲನೆ ನೀಡಿದರು. ಜಾಥಾದಲ್ಲಿ ಭಾಗವಹಿಸಿದ್ದ ಹುಲಿವೇಷಧಾರಿ ಚಿಣ್ಣರನ್ನು ತಬ್ಬಿಕೊಂಡು ಜಿಲ್ಲಾಧಿಕಾರಿ ಭಾವುಕರಾದರು. ಬಳಿಕ ವಿಶೇಷ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅವರು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT