ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲ | ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿ ಲಂಚಕ್ಕೆ ಬೇಡಿಕೆ

ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ– ಎಫ್‌ಐಆರ್‌ ದಾಖಲು
Published 9 ಏಪ್ರಿಲ್ 2024, 8:19 IST
Last Updated 9 ಏಪ್ರಿಲ್ 2024, 8:19 IST
ಅಕ್ಷರ ಗಾತ್ರ

ಉಳ್ಳಾಲ: ಕಂದಾಯ ಅಧಿಕಾರಿಯೊಬ್ಬರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯಾಗಿರುವ ಪುರುಷೋತ್ತಮ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಚಾರ ತಂಡದಲ್ಲಿ (ಫ್ಲೈಯಿಂಗ್‌ ಸ್ಕ್ವ್ಯಾಡ್) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಏ. 5ರಂದು  ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆ ವರೆಗೆ ಚುನಾವಣಾ ಪ್ಲೈಯಿಂಗ್ ತಂಡ 1 ರಲ್ಲಿ ಅವರು ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಮಧ್ಯಾಹ್ನದವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.’

‘ಅಂದು ಮಧ್ಯಾಹ್ನ  1.09ರ ಸುಮಾರಿಗೆ ವಾಟ್ಸ್‌ಆ್ಯಪ್‌ ಬಳಸಿ ಕರೆ ಮಾಡಿದ್ದ ವ್ಯಕ್ತಿ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ.  ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಪೋನ್ ಕೊಟ್ಟಿದ್ದರು. ಆ ವ್ಯಕ್ತಿಯು  ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಸರಿ ಮಾಡುವುದಾದರೆ ಮಾಡುವ’ ಎಂದು ಹೇಳಿ ಮೊದಲು ಮಾತನಾಡಡಿದ್ದ ವ್ಯಕ್ತಿಗೆ ಪೋನ್ ಕೊಟ್ಟಿದ್ದರು. ಅಲ್ಲದೇ ₹ 80 ಸಾವಿರವನ್ನು ಪೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು.’

‘ತನಗೆ  9 ತಿಂಗಳಿನಿಂದ ಸಂಬಳ ಆಗಿಲ್ಲ ಎಂದು ಪುರುಷೋತ್ತಮ ಅವರು ಹೇಳಿದಕ್ಕೆ ₹ 50 ಸಾವಿರವನ್ನಾದರೂ ಪೋನ್ ಪೇ ಮೂಲಕ ಕಳುಹಿಸಬೇಕು. ಇಲ್ಲದಿದ್ದರೆ ತೊಂದರೆ ಆಗುತ್ತದೆ ಎಂದು ಬೆದರಿಕೆ ಹಾಕಿದ್ದರು. ಪುರುಷೋತ್ತಮ ಅವರು ಟ್ರೂ ಕಾಲರ್ ಆ್ಯಪ್‌ನಲ್ಲಿ ಪರಿಶೀಲಿಸಿದಾಗ ಕರೆ ಬಂದ ಮೊಬೈಲ್‌ ನಂಬರ್  ‘ಡಿ. ಪ್ರಭಾಕರ, ಲೋಕಾಯುಕ್ತ ಪಿ.ಐ’ ಎಂದು ತೋರಿಸಿತ್ತು. ಈ ಬಗ್ಗೆ  ಲೋಕಾಯುಕ್ತ ಪೊಲೀಸರ ಮಂಗಳೂರು ಕಚೇರಿಯ ಅಧಿಕಾರಿಗಳಲ್ಲಿ ವಿಚಾರಿಸಿದ್ದು. ಅಂತಹ ಹೆಸರಿನ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ತಮ್ಮ ಕಚೇರಿಯಲ್ಲಿ ಇಲ್ಲ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದರು.’

‘ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯ ಕಚೇರಿಯ  ಹಿರಿಯ ಆರೋಗ್ಯ ನಿರೀಕ್ಷಕರಾದ ಲಿಲ್ಲಿ ನಾಯರ್ ಮತ್ತು  ಕೃಷ್ಣ ಆರ್ ಅವರಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಮೋಸದಿಂದ ಹಣ ಪಡೆದು ವಂಚಿಸುವ ದುರುದ್ದೇಶದಿಂದ ತಮಗೆ ಹಾಗೂ ತಮ್ಮ ಕಚೇರಿ ಸಿಬ್ಬಂದಿಗೆ ಈ ರೀತಿ ಕರೆ ಮಾಡಲಾಗಿದೆ ಎಂದು ಪುರುಷೋತ್ತಮ ಅವರು ದೂರಿನಲ್ಲಿ ವಿವರಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT