ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್‌ಸ್ಪೆಕ್ಟರ್ ಹೆಸರಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ

Last Updated 19 ಜನವರಿ 2023, 5:07 IST
ಅಕ್ಷರ ಗಾತ್ರ

ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಂನ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್‌ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತಮ್ಮ ಇನ್ಸ್ಟಾಗ್ರಾಂ ಹಾಗೂ ಫೇಸ್ ಬುಕ್ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಇನ್ಸ್ಟಾಗ್ರಾಂನಲ್ಲಿ ಸಂದೀಪ್ ಅವರ ಹೆಸರಿನ ನಕಲಿ ಖಾತೆ ತೆರೆದು ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದೆ.

ಕಷ್ಟದಲ್ಲಿ ಸಿಲುಕಿದ್ದೇನೆ ಎಂದು ಹೇಳಿಕೊಂಡು ₹ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ. ಇದು ಗಮನಕ್ಕೆ ಬರುತ್ತಿದ್ದಂತೆಯೇ ಸಂದೀಪ್‌ ಅವರು ಇಂತಹ ಸಂದೇಶಗಳನ್ನು ನೋಡಿ ಹಣ ಕಳುಹಿಸಬೇಡಿ ಎಂದು ಸಂದೇಶ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT