ಪುತ್ತೂರು: ಮಳೆಯೊಂದಿಗೆ ಬೀಸಿದ ಭಾರಿ ಗಾಳಿಯಿಂದಾಗಿ ಮನೆಯೊಂದರ ಮೇಲೆ ಭಾರಿ ಗಾತ್ರದ ಮರ ಉರುಳಿ ಮನೆಗೆ, ಕೊಟ್ಟಿಗೆಗೆ ಹಾನಿಯಾದ ಘಟನೆ ಪುತ್ತೂರು ತಾಲ್ಲೂಕಿನ ಕೆಯ್ಯೂರು ಗ್ರಾಮದ ಬೈರೆತ್ತಿಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಬೈರೆತ್ತಿಕೆರೆ ನಿವಾಸಿ ರತ್ನಾವತಿ ನಾಯ್ಕ್ ಅವರ ಹೆಂಚಿನ ಮನೆಗೆ ಹಾನಿಯಾಗಿದೆ. ಮರ ಉರುಳಿದಾಗ ರತ್ನಾವತಿ ಮತ್ತು ಅವರ ಇಬ್ಬರು ಮಕ್ಕಳು ಮನೆಯೊಳಗೆ ಮಲಗಿದ್ದರು. ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಕೆಯ್ಯೂರು ಗ್ರಾಮದ ಕಣಿಯಾರು ನಿವಾಸಿ ಪಾರ್ಥಿವ್ ಗೌಡ ಎಂಬುವರ ಕೊಟ್ಟಿಗೆಗೆ ಹಾನಿಯಾಗಿದೆ. ಸ್ಥಳಕ್ಕೆ ಕೆಯ್ಯೂರು ಗ್ರಾ.ಪಂ.ಅಧ್ಯಕ್ಷ ಶರತ್ಕುಮಾರ್ ಮಾಡಾವು, ಸದಸ್ಯರಾದ ವಿಜಯಕುಮಾರ್, ತಾರಾನಾಥ ಕಂಪ, ಸುಭಾಷಿಣಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ., ಕಾರ್ಯದರರ್ಶಿ ಸುರೇಂದ್ರ ರೈ ಇಳಂತಾಜೆ, ಗ್ರಾಮ ಸಹಾಯಕ ನಾರಾಯಣ್ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.