ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಳ್ಳು ದೂರು: ವಿದ್ಯಾರ್ಥಿನಿಯ ವಜಾಕ್ಕೆ ಆಗ್ರಹ

Published 23 ಆಗಸ್ಟ್ 2024, 6:29 IST
Last Updated 23 ಆಗಸ್ಟ್ 2024, 6:29 IST
ಅಕ್ಷರ ಗಾತ್ರ

ಪುತ್ತೂರು: ‘ಹರಿತ ಆಯುಧದಿಂದ ಕೈಗೆ ಇರಿಯಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿ ಮೇಲೆ ಸುಳ್ಳು ದೂರು ನೀಡಿ ಆತನ ಮಾನಹಾನಿ ಮಾಡಿರುವ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸಬೇಕು’ ಎಂದು ಕಾಲೇಜಿನ ವಿದ್ಯಾರ್ಥಿ ಸಂಘಟನೆಯವರು ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಸತೀಶ್ ಜಿ.ಜೆ.ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸುಳ್ಳು ದೂರು ದಾಖಲಾಗಿರುವ ಸಂತ್ರಸ್ತ ವಿದ್ಯಾರ್ಥಿಯ ಪೊಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಲಾಗುತ್ತಿದ್ದು, ಅವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಸುಳ್ಳು ದೂರು ನೀಡಿರುವ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸದಿದ್ದರೆ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳು ಪುತ್ತೂರು ನಗರದ ಸಭಾಭವನವೊಂದರಲ್ಲಿ ಗುರುವಾರ ಸಭೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT